ಕೇಪ್‌ಟೌನ್: ಆತಿಥೇಯ ದಕ್ಷಿಣ ಆಫ್ರಿಕಾ ಮತ್ತು ಭಾರತ ತಂಡಗಳು ಗುರುವಾರ ಇಲ್ಲಿ ನಡೆಯುತ್ತಿರುವ ಏಕದಿನ ಕ್ರಿಕೆಟ್ ಸರಣಿಯ ಕೊನೆಯ ಪಂದ್ಯದಲ್ಲಿ ಮುಖಾಮುಖಿಯಾಗಿವೆ.
ಭಾರತದ ವಿರುದ್ಧ ಟಾಸ್ ಗೆದ್ದಿರುವ ದಕ್ಷಿಣ ಆಫ್ರಿಕಾ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಮೂರು ಪಂದ್ಯಗಳ ಸರಣಿಯಲ್ಲಿ 1–1ರಿಂದ ಸಮಬಲ ಸಾಧಿಸಿರುವ ಉಭಯ ತಂಡಗಳು ಈಗ ಕೊನೆಯದ್ದರಲ್ಲಿ ಜಯಿಸಿ ಕಿರೀಟ ಧರಿಸುವ ಛಲದಲ್ಲಿವೆ.
ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡವು ಬೌಲರ್‌ಗಳ ಅಮೋಘ ಆಟದ ಬಲದಿಂದ ಸುಲಭ ಜಯ ಸಾಧಿಸಿತ್ತು. ಆದರೆ ಎರಡನೇ ಪಂದ್ಯದಲ್ಲಿ ಕಳಪೆ ಬ್ಯಾಟಿಂಗ್‌ನಿಂದಾಗಿ ಸೋತಿತು.
ಭಾರತದ ಪರ ರಜತ್ ಪಾಟೀದಾರ್ ಅವರು ಮೊದಲ ಏಕದಿನ ಪಂದ್ಯ ಆಡುತ್ತಿದ್ದಾರೆ. ತಂಡಕ್ಕೆ ವಾಷಿಂಗ್ಟನ್ ಸುಂದರ್ ಕೂಡ ಮರಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.