ಕಂಗ್ರಾ, ಹಿಮಾಚಲ ಪ್ರದೇಶ: ರಸ್ತೆ ಅಪಘಾತದಲ್ಲಿ ಟೀಂ ಇಂಡಿಯಾ ಮಾಜಿ ಕ್ರಿಕೆಟರ್ ಸುರೇಶ್ ರೈನಾ ಅವರ ಸೋದರ ಸಂಬಂಧಿ ಮೃತಪಟ್ಟಿರುವುದು ವರದಿಯಾಗಿದೆ.
ಹಿಮಾಚಲ ಪ್ರದೇಶದ ಕಂಗ್ರಾ ಜಿಲ್ಲೆಯ ಗಗ್ಗಲ್ ಎಂಬಲ್ಲಿ ನಡೆದ ಬೈಕ್ ಅಪಘಾತದಲ್ಲಿ ಸುರೇಶ್ ರೈನಾ ಅವರ ಚಿಕ್ಕಪ್ಪನ ಮಗ ಸೌರಭ್ ಕುಮಾರ್ ಹಾಗೂ ಅವರ ಸ್ನೇಹಿತ ಶುಭಂ ಮೃತರಾಗಿದ್ದಾರೆ ಎಂದು ಕಂಗ್ರಾ ಎಸ್.ಪಿ ಶಾಲಿನಿ ಅಗ್ನಿಹೋತ್ರಿ ತಿಳಿಸಿದ್ದಾರೆ.
ಗಗ್ಗಲ್ ಬಳಿ ಬೈಕ್ ನಲ್ಲಿ ಹೋಗುತ್ತಿದ್ದ ಸೌರಭ್ ಹಾಗೂ ಶುಭಂ ಅವರಿಗೆ ಕಾರೊಂದು ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ. ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಕಾರು ಚಾಲಕ ಶೇರ್ ಸಿಂಗ್ ಎನ್ನುವರನ್ನು ಬಂಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಈ ಕುರಿತು ದೂರು ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಎನ್.ಡಿ.ಟಿ.ವಿ ವರದಿ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.