ADVERTISEMENT

T20 World Cup | ಭಾರತ vs ಕೆನಡಾ ಪಂದ್ಯಕ್ಕೆ ಮಳೆ ಭೀತಿ; ಅಭ್ಯಾಸ ರದ್ದು: ವರದಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 14 ಜೂನ್ 2024, 12:34 IST
Last Updated 14 ಜೂನ್ 2024, 12:34 IST
<div class="paragraphs"><p>ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ</p></div>

ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ

   

(ಪಿಟಿಐ ಸಂಗ್ರಹ ಚಿತ್ರ)

ಲೌಡರ್‌ಹಿಲ್: ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಶನಿವಾರ ನಡೆಯಲಿರುವ ಭಾರತ ಹಾಗೂ ಕೆನಡಾ ನಡುವಣ ಪಂದ್ಯಕ್ಕೆ ಮಳೆ ಭೀತಿ ಕಾಡುತ್ತಿದೆ.

ADVERTISEMENT

ಫ್ಲಾರಿಡಾದಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಹಲವೆಡೆ ಪ್ರವಾಹದ ಸ್ಥಿತಿ ಉಂಟಾಗಿದೆ. ಶನಿವಾರವೂ ಮಳೆ ಮುಂದುವರಿಯುವ ಸಂಭವ ಇದೆ.

ಮಳೆಯಿಂದಾಗಿ ಶುಕ್ರವಾರ ನಡೆಯಬೇಕಿದ್ದ ಭಾರತದ ಅಭ್ಯಾಸದ ಅವಧಿ ರದ್ದುಗೊಂಡಿದೆ ಎಂದು ವರದಿಯಾಗಿದೆ.

ಈ ಮೊದಲು ಅಮೆರಿಕದ ನ್ಯೂಯಾರ್ಕ್‌ನಲ್ಲಿ ನಡೆದ ಎಲ್ಲ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದ ಟೀಮ್ ಇಂಡಿಯಾ, ಸೂಪರ್ ಎಂಟರ ಘಟಕ್ಕೆ ಲಗ್ಗೆ ಇಟ್ಟಿತ್ತು. ಬಳಿಕ ಫ್ಲಾರಿಡಾಗೆ ಪಯಣ ಬೆಳೆಸಿತು.

ವಿರಾಟ್ ನಂ.3 ?

ಆರಂಭಿಕನಾಗಿ ಸತತ ಮೂರು ಪಂದ್ಯಗಳಲ್ಲಿ ವೈಫಲ್ಯ ಕಂಡಿರುವ ವಿರಾಟ್ ಕೊಹ್ಲಿ ಹಿಂದಿನಂತೆ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಬೇಕು ಎಂಬ ಕುರಿತು ಚರ್ಚೆಗಳು ಕೇಳಿಬಂದಿವೆ. ನಾಯಕ ರೋಹಿತ್ ಶರ್ಮಾ ಜತೆ ಎಡಗೈ ಬ್ಯಾಟರ್ ಯಶಸ್ವಿ ಜೈಸ್ವಾಲ್ ಇನ್ನಿಂಗ್ ಆರಂಭಿಸಬೇಕು ಎಂಬುದು ಕ್ರಿಕೆಟ್ ಪರಿಣಿತರ ಲೆಕ್ಕಾಚಾರವಾಗಿದೆ.

ಭಾರತ ಈಗಾಗಲೇ ಸೂಪರ್ ಎಂಟರ ಘಟ್ಟಕ್ಕೆ ಪ್ರವೇಶಿಸಿರುವ ಹಿನ್ನೆಲೆಯಲ್ಲಿ ಸಂಜು ಸ್ಯಾಮ್ಸನ್, ಕುಲದೀಪ್ ಯಾದವ್ ಹಾಗೂ ಯಜುವೇಂದ್ರ ಚಾಹಲ್ ಅವರಿಗೂ ಅವಕಾಶ ಸಿಗಬಹುದೇ ಎಂಬುದನ್ನು ಕಾದು ನೋಡಬೇಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.