ಬೆಂಗಳೂರು: ಟಿ20 ವಿಶ್ವಕಪ್ ಪಂದ್ಯಾವಳಿ ಅಂತಿಮ ಹಂತಕ್ಕೆ ತಲುಪಿದ್ದು ನಾಲ್ಕು ತಂಡಗಳು ಸೆಮಿಫೈನಲ್‌ಗೆ ಲಗ್ಗೆ ಹಾಕಿವೆ.
ಅಫ್ಗಾನಿಸ್ತಾನ ಮೊದಲ ಬಾರಿಗೆ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸೆಮಿಫೈನಲ್ ಪ್ರವೇಶ ಪಡೆದಿದೆ.
ಈ ಪಂದ್ಯಾವಳಿಯಲ್ಲಿ ಭಾರತ, ದಕ್ಷಿಣ ಆಫ್ರಿಕಾ, ಇಂಗ್ಲೆಂಡ್ ಹಾಗೂ ಅಫ್ಗಾನಿಸ್ತಾನ ತಂಡಗಳು ಸೆಮಿಫೈನಲ್ ಪ್ರವೇಶಿಸಿವೆ. ಸೂಪರ್ 8ರ ಹಂತದಲ್ಲಿ ಭಾರತ, ದಕ್ಷಿಣ ಆಫ್ರಿಕಾ ತಲಾ 6 ಅಂಕ ಪಡೆದಿದ್ದವು. ಇಂಗ್ಲೆಂಡ್, ಅಫ್ಗಾನಿಸ್ತಾನ ತಲಾ 4 ಅಂಕ ಪಡೆದುಕೊಂಡಿದ್ದವು.
ಈ ಸಲದ ವಿಶ್ವಕಪ್ ಟೂರ್ನಿಯಲ್ಲಿ ನ್ಯೂಜಿಲೆಂಡ್, ಆಸ್ಟ್ರೇಲಿಯಾ, ವಿಂಡೀಸ್, ಶ್ರೀಲಂಕಾ ಹಾಗೂ ಪಾಕಿಸ್ತಾನ ತಂಡಗಳು ಟೂರ್ನಿಯಿಂದ ಹೊರಬಿದ್ದಿವೆ.
ಮೊದಲ ಸೆಮಿಫೈನಲ್...
ಮೊದಲ ಸೆಮಿಫೈನಲ್ ಪಂದ್ಯವು ಅಫ್ಗಾನಿಸ್ತಾನ ಮತ್ತು ದಕ್ಷಿಣ ಆಫ್ರಿಕಾದ ನಡುವೆ ನಡೆಯಲಿದೆ. ಟ್ರೆನಿಡಾಡ್‌ನ ಲಾರಾ ಕ್ರೀಡಾಂಗಣದಲ್ಲಿ ಜೂನ್ 26ರಂದು ಪಂದ್ಯ ನಡೆಯಲಿದೆ.
ಎರಡನೇ ಸೆಮಿಫೈನಲ್...
ಗಯಾನಾದಲ್ಲಿ ಜೂನ್ 27ರಂದು ಭಾರತ ಮತ್ತು ಇಂಗ್ಲೆಂಡ್ ನಡುವೆ ಎರಡನೇ ಸೆಮಿಫೈನಲ್ ಪಂದ್ಯ ನಡೆಯಲಿದೆ. 2022ರ ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲೂ ಇವೆರಡು ತಂಡಗಳು ಮುಖಾಮುಖಿ ಆಗಿದ್ದವು.
ಸೆಮಿಫೈನಲ್‌ನಲ್ಲಿ ಗೆದ್ದ ತಂಡಗಳು ಫೈನಲ್‌ನಲ್ಲಿ ಮುಖಾಮುಖಿಯಾಗಲಿವೆ. ಫೈನಲ್ ಪಂದ್ಯ ಜೂನ್ 29ರಂದು ಬಾರ್ಬಡಸ್‌ನಲ್ಲಿ ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.