ADVERTISEMENT

T20 World Cup | ಗೆದ್ದು ಬಾ ಭಾರತ: ಹೋಮ, ಹವನದ ಮೂಲಕ ಶುಭ ಕೋರಿದ ಅಭಿಮಾನಿಗಳು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 29 ಜೂನ್ 2024, 5:46 IST
Last Updated 29 ಜೂನ್ 2024, 5:46 IST
   

ನವದೆಹಲಿ: ಟಿ20 ವಿಶ್ವಕಪ್​ನ ಫೈನಲ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದ್ದು ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಸೆಣಸಲಿವೆ.

ಬಾರ್ಬಡೋಸ್​ನ ಓವಲ್ ಮೈದಾನದಲ್ಲಿ ಶನಿವಾರ ರಾತ್ರಿ (ಭಾರತೀಯ ಕಾಲಮಾನ) ಪಂದ್ಯ ನಡೆಯಲಿದೆ.

ಈ ಬಾರಿಯ ವಿಶ್ವಕಪ್​ನಲ್ಲಿ ಉಭಯ ತಂಡಗಳು ಸೋಲಿಲ್ಲದ ಸರದಾರರಾಗಿ ಫೈನಲ್​ಗೆ ಪ್ರವೇಶಿಸಿದೆ. ಇದಾಗ್ಯೂ ಆಫ್ರಿಕನ್ನರ ವಿರುದ್ಧ ಭಾರತವೇ ಗೆಲ್ಲುವ ಫೇವರೇಟ್ ತಂಡವಾಗಿ ಗುರುತಿಸಿಕೊಂಡಿದೆ. 

ADVERTISEMENT

ಭಾರತ ಮತ್ತು ಆಫ್ರಿಕಾ ತಂಡಗಳು ಟಿ20 ಕ್ರಿಕೆಟ್​ನಲ್ಲಿ ಈವರೆಗೆ 26 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಆಫ್ರಿಕಾ 11 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೇ, ಟೀಮ್ ಇಂಡಿಯಾ 13 ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದೆ. ಹಾಗೇ ಟಿ20 ವಿಶ್ವಕಪ್​ನಲ್ಲಿ ಉಭಯ ತಂಡಗಳು 6 ಬಾರಿ ಪರಸ್ಪರ ಕಣಕ್ಕಿಳಿದಿವೆ. ಟೀಮ್ ಇಂಡಿಯಾ 4, ಆಫ್ರಿಕಾ 2 ಬಾರಿ ಮಾತ್ರ ಗೆದ್ದಿದೆ.

ಭಾರತ ತಂಡದ ಗೆಲುವಿಗಾಗಿ ಕ್ರಿಕೆಟ್‌ ಅಭಿಮಾನಿಗಳು ದೇವರಿಗೆ ವಿಶೇಷ ಪೂಜೆ, ಹೋಮ, ಹವನ ಮಾಡಿಸುವ ಮೂಲಕ ಅಭಿಮಾನ ಮೆರೆಯುತ್ತಿದ್ದಾರೆ.

ಉತ್ತರಪ್ರದೇಶದ ಕಾನ್ಪುರ, ಪ್ರಯಾಗರಾಜ್‌ನಲ್ಲಿ ಟೀಂ ಇಂಡಿಯಾ ಕಪ್‌ ಗೆಲ್ಲಲಿ ಎಂದು ಅಭಿಮಾನಿಗಳು ವಿಶೇಷ ಪೂಜೆ ಮಾಡಿದರು.

ಕರ್ನಾಟಕದ ಹುಬ್ಬಳ್ಳಿಯಲ್ಲಿ ಮಕ್ಕಳು ಗೆದ್ದು ಬಾ ಭಾರತ ಎಂದು ಹೇಳುವ ಮೂಲಕ ಭಾರತ ತಂಡಕ್ಕೆ ಶುಭ ಕೋರಿದರು.

ಉತ್ತರಪ್ರದೇಶದ ವಾರಾಣಸಿಯಲ್ಲಿ ಭಾರತದ ಗೆಲುವಿಗಾಗಿ ಅಭಿಮಾನಿಗಳು ಹೋಮ–ಹವನ ನಡೆಸಿದರು.

ಚಿತ್ರ ಕಲಾವಿದರಾಗಿರುವ ಅಭಿಮಾನಿಯೊಬ್ಬರು best of Luck team india ಎಂಬ ಚಿತ್ರ ರಚಿಸುವ ಮೂಲಕ ಅಭಿಮಾನ ಮೆರೆದರು

 ತಂಡಗಳು (ಸಂಭವನೀಯ)

ಭಾರತ: ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ರಿಷಬ್ ಪಂತ್ (ವಿಕೆಟ್‌ ಕೀಪರ್), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ರವೀಂದ್ರ ಜಡೇಜ, ಅಕ್ಷರ್ ಪಟೇಲ್, ಜಸ್‌ಪ್ರೀತ್ ಬೂಮ್ರಾ, ಕುಲದೀಪ್ ಯಾದವ್,  ಅರ್ಷದೀಪ್ ಸಿಂಗ್.

ದಕ್ಷಿಣ ಆಫ್ರಿಕಾ: ಏಡನ್ ಮರ್ಕರಂ (ನಾಯಕ), ಕ್ವಿಂಟನ್ ಡಿ ಕಾಕ್ (ವಿಕೆಟ್‌ಕೀಪರ್), ರೀಜಾ ಹೆನ್ರಿಕ್ಸ್, ಟ್ರಿಸ್ಟನ್ ಸ್ಟಬ್ಸ್, ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಮಾರ್ಕೊ ಯಾನ್ಸೆನ್, ಕೇಶವ್ ಮಹಾರಾಜ್, ಕಗಿಸೊ ರಬಾಡ, ಎನ್ರಿಚ್ ನಾಕಿಯಾ, ತಬ್ರೇಜ್ ಶಮ್ಸಿ.

ಪಂದ್ಯ ಆರಂಭ: ರಾತ್ರಿ 8

ನೇರಪ್ರಸಾರ: ಸ್ಟಾರ್ ಸ್ಪೋರ್ಟ್ಸ್, ಡಿಡಿ ಸ್ಪೋರ್ಟ್ಸ್, ಹಾಟ್‌ಸ್ಟಾರ್ ಆ್ಯಪ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.