ವೆಲ್ಲಿಂಗ್ಟನ್: ನ್ಯೂಜಿಲೆಂಡ್ ತಂಡದ ಆಟಗಾರ ರಾಸ್ ಟೇಲರ್ ವಿನೂತನ ದಾಖಲೆ ಬರೆದರು. ಕ್ರಿಕೆಟ್ನ ಮೂರು ಮಾದರಿಗಳಲ್ಲಿಯೂ ನೂರು ಪಂದ್ಯಗಳನ್ನಾಡಿದ ಮೊದಲ ಕ್ರಿಕೆಟಿಗನೆಂಬ ಹೆಗ್ಗಳಿಕೆಗೆ ಪಾತ್ರರಾದರು.
ಶುಕ್ರವಾರ ಭಾರತದ ಎದುರು ಅವರು ತಮ್ಮ ನೂರನೇ ಟೆಸ್ಟ್ ಪಂದ್ಯ ಆಡಲು ಕಣಕ್ಕಿಳಿದರು. ಅವರು ಈಗಾಗಲೇ ಏಕದಿನ ಕ್ರಿಕೆಟ್ನಲ್ಲಿ 231 ಮತ್ತು 100 ಟಿ20 ಪಂದ್ಯಗಳನ್ನು ಆಡಿದ್ದಾರೆ.
35 ವರ್ಷದ ಟೇಲರ್, ಟೆಸ್ಟ್ ಕ್ರಿಕೆಟ್ನಲ್ಲಿ 7174 ರನ್ ಗಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.