ನವದೆಹಲಿ : ಭಾರತ ಕ್ರಿಕೆಟ್ ತಂಡದ ಅಪ್ಪಟ ಅಭಿಮಾನಿ ಚಾರುಲತಾ ಪಟೇಲ್ (87) ಅನಾರೋಗ್ಯದಿಂದ ಶುಕ್ರವಾರ ನಿಧನರಾದರು.
ಇಂಗ್ಲೆಂಡ್ನಲ್ಲಿ ನಡೆದ ವಿಶ್ವಕಪ್ ಟೂರ್ನಿಯ ಸಂದರ್ಭದಲ್ಲಿ ಗ್ಯಾಲರಿಯಲ್ಲಿ ಕುಳಿತು ಭಾರತ ತಂಡವನ್ನು ಹುರಿದುಂಬಿಸಿದ್ದ ಅವರು ‘ಸೂಪರ್ ಫ್ಯಾನ್’ ಎಂದೇ ಪ್ರಸಿದ್ಧರಾಗಿದ್ದರು. ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತು ಉಪನಾಯಕವಿಶ್ವಕಪ್ ಟೂರ್ನಿಯ ಸಂದರ್ಭದಲ್ಲಿ ಅವರಿಂದ ಆಶೀರ್ವಾದ ಪಡೆದುಕೊಂಡಿದ್ದರು. ಚಾರುಲತಾ ಅವರ ನಿಧನಕ್ಕೆ ಬಿಸಿಸಿಐ ಸಂತಾಪ ಸೂಚಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.