ಹೈದರಾಬಾದ್: ದಕ್ಷಿಣ ಆಫ್ರಿಕಾ ಎದುರು 1-2 ಅಂತರದಲ್ಲಿ ಟೆಸ್ಟ್ ಸರಣಿ ಸೋತ ನಂತರ ವಿರಾಟ್ ಕೊಹ್ಲಿ ಟೆಸ್ಟ್ ತಂಡದ ನಾಯಕತ್ವವನ್ನು ತ್ಯಜಿಸಿದ್ದರು. ಇದೀಗ, ಭಾರತದ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಅವರು ವಿರಾಟ್ ಕೊಹ್ಲಿ ಅವರನ್ನು ‘ಸೂಪರ್ ಹೀರೊ’ಎಂದು ಕರೆದಿದ್ದಾರೆ.
ಸೆಂಚುರಿಯ್‌ನ ಮೊದಲ ಟೆಸ್ಟ್ ಪಂದ್ಯದಲ್ಲಿ ಸಿರಾಜ್ 3 ವಿಕೆಟ್ ಪಡೆದಿದ್ದರು. ಈ ಪಂದ್ಯದಲ್ಲಿ ಭಾರತವು ಆತಿಥೇಯ ತಂಡವನ್ನು 113 ರನ್‌ಗಳಿಂದ ಸೋಲಿಸಿತ್ತು. ಜೋಹಾನ್ಸ್‌ಬರ್ಗ್‌ನಲ್ಲಿ ಭಾರತ ಏಳು ವಿಕೆಟ್‌ಗಳಿಂದ ಸೋತ ಎರಡನೇ ಟೆಸ್ಟ್‌ನ ಆರಂಭಿಕ ದಿನದಂದು ಅವರು ಮಂಡಿರಜ್ಜು ಸಮಸ್ಯೆಗೆ ತುತ್ತಾಗಿದ್ದರು. 3ನೇ ಟೆಸ್ಟ್ ಪಂದ್ಯಕ್ಕೆ ಸಿರಾಜ್ ಫಿಟ್ ಆಗಿರಲಿಲ್ಲ.
ಟೆಸ್ಟ್ ಸರಣಿ ಬಳಿಕ ಕೊಹ್ಲಿ ನಾಯಕತ್ವವನ್ನು ತ್ಯಜಿಸಿದ್ದಾರೆ. ಕೊಹ್ಲಿ ಅವರ ಬಗ್ಗೆ 27 ವರ್ಷದ ಮೊಹಮ್ಮದ್ ಸಿರಾಜ್ ಅವರು ಮಂಗಳವಾರ ಇನ್‌ಸ್ಟಾಗ್ರಾಂನಲ್ಲಿ ಹೃದಯಸ್ಪರ್ಶಿ ಸಂದೇಶವನ್ನು ಪೋಸ್ಟ್ ಮಾಡಿದ್ದಾರೆ.
‘ನನ್ನ ಸೂಪರ್‌ಹೀರೋಗೆ, ನಿಮ್ಮಿಂದ ನನಗೆ ದೊರೆತ ಬೆಂಬಲ ಮತ್ತು ಪ್ರೋತ್ಸಾಹಕ್ಕಾಗಿ ನಾನು ಆಭಾರಿಯಾಗಿದ್ದೇನೆ. ನೀವು ಯಾವಾಗಲೂ ನನ್ನ ಅತ್ಯುತ್ತಮ ಸಹೋದರ. ಹಲವು ವರ್ಷಗಳಿಂದ ನನ್ನನ್ನು ನಂಬಿದ್ದಕ್ಕಾಗಿ ಮತ್ತು ನನ್ನಲ್ಲಿ ನಂಬಿಕೆ ಇಟ್ಟಿದ್ದಕ್ಕಾಗಿ ಧನ್ಯವಾದಗಳು. ಕೆಟ್ಟ ಸಮಯದಲ್ಲೂ ನನ್ನಲ್ಲಿ ಶ್ರೇಷ್ಠತೆ ಗುರುತಿಸಿದ ನೀವು ಯಾವಾಗಲೂ ನನ್ನ ನಾಯಕ.. ಕಿಂಗ್ ಕೊಹ್ಲಿ’ಎಂದು ಸಿರಾಜ್ ಬರೆದಿದ್ದಾರೆ.
ನಾಳೆಯಿಂದ ಪಾರ್ಲ್‌ನಲ್ಲಿ ಪ್ರಾರಂಭವಾಗುವ ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಕೊಹ್ಲಿ ಈಗ ಒಬ್ಬ ಬ್ಯಾಟರ್ ಆಗಿ ಕಣಕ್ಕಿಳಿಯಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.