ನವದೆಹಲಿ: ಬ್ರಿಸ್ಬೇನ್‌ನಲ್ಲಿ ನಡೆಯುತ್ತಿರುವ ನಾಲ್ಕನೇ ಮತ್ತು ಅಂತಿಮ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಉತ್ತಮ ಪ್ರದರ್ಶನ ನೀಡುತ್ತಿದೆ. ಭಾರತದ ಬಹುತೇಕ ಮತ್ತು ಪ್ರಮುಖ ಬ್ಯಾಟ್ಸ್‌ಮನ್‌ಗಳು ಗಾಯದ ಸಮಸ್ಯೆಗೆ ತುತ್ತಾಗಿದ್ದರೂ, ಟೀಮ್ ಇಂಡಿಯಾ ಮಾತ್ರ ಪಂದ್ಯ ಗೆದ್ದೇ ಗೆಲ್ಲುವ ಆತ್ಮವಿಶ್ವಾಸ ವ್ಯಕ್ತಪಡಿಸಿದೆ. ಈ ಮಧ್ಯೆ ಭಾರತ ತಂಡದ ಪರಿಶ್ರಮವನ್ನು ವಿರಾಟ್ ಕೊಹ್ಲಿ ಟ್ವಿಟರ್ ಮೂಲಕ ಅಭಿನಂದಿಸಿದ್ದಾರೆ.
ಬೌಲಿಂಗ್ ಜತೆಗೇ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿರುವ ವಾಷಿಂಗ್ಟನ್ ಸುಂದರ್ ಮತ್ತು ಶಾರ್ದೂಲ್ ಠಾಕೂರ್ ಉತ್ತಮ ಜತೆಯಾಟ ತೋರಿದ್ದು, ಒಟ್ಟು 123 ರನ್ ಗಳಿಸಿದ್ದಾರೆ. ಹೀಗಾಗಿ ವಿರಾಟ್ ಕೊಹ್ಲಿ ಇಬ್ಬರು ಆಟಗಾರರಿಗೂ ಟ್ವಿಟರ್ ಮೂಲಕ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ನಾಲ್ಕು ಟೆಸ್ಟ್ ಪಂದ್ಯಗಳ ಪೈಕಿ ಭಾರತ ಮತ್ತು ಆಸ್ಟ್ರೇಲಿಯಾ ತಲಾ ಒಂದೊಂದು ಟೆಸ್ಟ್ ಪಂದ್ಯ ಗೆದ್ದುಕೊಂಡಿವೆ. ಮೂರನೇ ಟೆಸ್ಟ್ ಪಂದ್ಯವನ್ನು ಭಾರತ ಡ್ರಾ ಮಾಡಿಕೊಂಡಿದೆ. ನಾಲ್ಕನೇ ಮತ್ತು ಅಂತಿಮ ಟೆಸ್ಟ್ ಪಂದ್ಯವನ್ನು ಉಭಯ ತಂಡಗಳು ಗೆಲ್ಲುವ ಇಂಗಿತ ವ್ಯಕ್ತಪಡಿಸಿದೆ.
ಟೀಮ್ ಇಂಡಿಯಾ, ಮೂರನೇ ದಿನದಾಟದಲ್ಲಿ 111.4 ಓವರ್‌ಗಳಲ್ಲಿ 336 ರನ್‌ಗಳಿಗೆ ತನ್ನೆಲ್ಲ ವಿಕೆಟ್‌ಗಳನ್ನು ಕಳೆದುಕೊಂಡಿದೆ.ಆಸ್ಟ್ರೇಲಿಯಾ ಮೂರನೇ ದಿನದಾಟದ ಅಂತ್ಯಕ್ಕೆ ಆರು ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 21 ರನ್ ಗಳಿಸಿದೆ. ಅಲ್ಲದೆ ಒಟ್ಟು ಮುನ್ನಡೆಯನ್ನು 54ಕ್ಕೆ ಏರಿಸಿದೆ. ಡೇವಿಡ್ ವಾರ್ನರ್ (20*) ಹಾಗೂ ಮಾರ್ನಸ್ ಹ್ಯಾರಿಸ್ (1*) ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.