ADVERTISEMENT

ಐಸಿಸಿ ಟೆಸ್ಟ್ ರ್‍ಯಾಂಕಿಂಗ್: ಕೊಹ್ಲಿ 5ನೇ ಸ್ಥಾನ, ರೋಹಿತ್–ಪಂತ್ ಜಂಟಿ 6ನೇ ಸ್ಥಾನ

ಪಿಟಿಐ
Published 9 ಜೂನ್ 2021, 14:59 IST
Last Updated 9 ಜೂನ್ 2021, 14:59 IST
ವಿರಾಟ್‌ ಕೊಹ್ಲಿ
ವಿರಾಟ್‌ ಕೊಹ್ಲಿ   

ದುಬೈ: ಭಾರತ ಕ್ರಿಕೆಟ್‌ ತಂಡದ ನಾಯಕ ವಿರಾಟ್ ಕೊಹ್ಲಿ ಅವರು ಐಸಿಸಿ ಟೆಸ್ಟ್ ಬ್ಯಾಟಿಂಗ್‌ ರ‍್ಯಾಂಕಿಂಗ್‌ನಲ್ಲಿ ಐದನೇ ಸ್ಥಾನವನ್ನು ಉಳಿಸಿಕೊಂಡರೆ, ರೋಹಿತ್ ಶರ್ಮಾ ಹಾಗೂ ರಿಷಬ್ ಪಂತ್ ಜಂಟಿ ಆರನೇ ಸ್ಥಾನದಲ್ಲಿದ್ದಾರೆ.

ನ್ಯೂಜಿಲೆಂಡ್‌ ತಂಡದ ಆರಂಭಿಕ ಆಟಗಾರ ಡೆವೊನ್ ಕಾನ್ವೇ ಚೊಚ್ಚಲ ಟೆಸ್ಟ್‌ ಪಂದ್ಯದಲ್ಲಿ ದ್ವಿಶತಕ ಸಿಡಿಸಿ 895 ಪಾಯಿಂಟ್ಸ್‌ಗಳೊಂದಿಗೆ ಟೆಸ್ಟ್‌ ರ‍್ಯಾಂಕಿಂಗ್‌ನಲ್ಲಿ 77ನೇ ಸ್ಥಾನ ಪಡೆದು ಗಮನ ಸೆಳೆದಿದ್ದಾರೆ.

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್ ಪಂದ್ಯವು ಸೌತಾಂಪ್ಟನ್‌ನಲ್ಲಿ ಜೂನ್ 18ರಿಂದ 22ರ ವರೆಗೆ ನಡೆಯಲಿದ್ದು, ಭಾರತ ತಂಡವು ನ್ಯೂಜಿಲೆಂಡ್ ವಿರುದ್ಧ ಆಡಲಿದೆ.ನಾಯಕ ವಿರಾಟ್‌ ಕೊಹ್ಲಿ 814 ಪಾಯಿಂಟ್ಸ್‌ಗಳೊಂದಿಗೆ 5ನೇ ಸ್ಥಾನದಲ್ಲಿದ್ದಾರೆ.

ADVERTISEMENT

ನ್ಯೂಜಿಲೆಂಟ್‌ ತಂಡದ ನಾಯಕ ಕೇನ್‌ ವಿಲಿಯಮ್ಸನ್‌ 895 ಪಾಯಿಂಟ್ಸ್‌ಗಳೊಂದಿಗೆ ಆಗ್ರಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್‌ (891), ಮಾರ್ನಸ್‌ ಲಾಬುಶೇನ್‌ (878), ಜೋ ರೂಟ್ (836) ಕ್ರಮವಾಗಿ ಎರಡು, ಮೂರು, ನಾಲ್ಕನೇ ಸ್ಥಾನದಲ್ಲಿದ್ದಾರೆ.

ಟೆಸ್ಟ್ ಬೌಲಿಂಗ್ ರ‍್ಯಾಂಕಿಂಗ್‌ನಲ್ಲಿ ಭಾರತದ ಹಿರಿಯ ಸ್ಪಿನ್ನರ್ ಆರ್.ಅಶ್ವಿನ್ ಎರಡನೇ ಸ್ಥಾನದಲ್ಲಿ (850 ಪಾಯಿಂಟ್ಸ್‌) ಮುಂದುವರಿದಿದ್ದಾರೆ. ಆಸ್ಟ್ರೇಲಿಯಾದ ವೇಗದ ಬೌಲರ್ ಪ್ಯಾಟ್ ಕಮಿನ್ಸ್‌ (908 ಪಾಯಿಂಟ್) ಆಗ್ರಸ್ಥಾನದಲ್ಲಿದ್ದಾರೆ.

ವೆಸ್ಟ್ ಇಂಡೀಸ್‌ನ ಜೇಸನ್ ಹೋಲ್ಡರ್‌ 423 ಪಾಯಿಂಟ್ಸ್‌ಗಳೊಂದಿಗೆ ಟೆಸ್ಟ್ ಆಲ್‌ರೌಂಡರ್ ರ‍್ಯಾಂಕಿಂಗ್‌ನಲ್ಲಿ ಅಗ್ರ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಭಾರತದ ರವೀಂದ್ರ ಜಡೇಜಾ (386 ಪಾಯಿಂಟ್ಸ್‌) ಮತ್ತು ಅಶ್ವಿನ್ (353) ಕ್ರಮವಾಗಿ ಎರಡನೇ ಮತ್ತು ನಾಲ್ಕನೇ ಸ್ಥಾನದಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.