ADVERTISEMENT

T20 WC: ಶ್ರೀಲಂಕಾದ ವನಿಂದು ಹಸರಂಗ 'ಹ್ಯಾಟ್ರಿಕ್' ವಿಕೆಟ್ ಸಾಧನೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 30 ಅಕ್ಟೋಬರ್ 2021, 17:29 IST
Last Updated 30 ಅಕ್ಟೋಬರ್ 2021, 17:29 IST
ವನಿಂದು ಹಸರಂಗ
ವನಿಂದು ಹಸರಂಗ   

ಶಾರ್ಜಾ: ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಶ್ರೀಲಂಕಾದ ಸ್ಪಿನ್ನರ್ ವನಿಂದು ಹಸರಂಗ 'ಹ್ಯಾಟ್ರಿಕ್' ವಿಕೆಟ್ ಸಾಧನೆ ಮಾಡಿದ್ದಾರೆ.

ಈ ಮೂಲಕ ಅಂತರರಾಷ್ಟ್ರೀಯ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಸಾಧನೆ ಮಾಡಿದ ಮೂರನೇ ಬೌಲರ್ ಎನಿಸಿದ್ದಾರೆ.

ಈ ಹಿಂದೆ 2007ರ ಟಿ20 ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾದ ಮಾಜಿ ವೇಗದ ಬೌಲರ್ ಬ್ರೆಟ್ ಲೀ ಹಾಗೂ ಪ್ರಸಕ್ತ ವಿಶ್ವಕಪ್‌ನಲ್ಲಿ ಐರ್ಲೆಂಡ್‌ನ ಕರ್ಟಿಸ್ ಕ್ಯಾಂಫರ್ ಹ್ಯಾಟ್ರಿಕ್ ವಿಕೆಟ್ ಗಳಿಸಿದ್ದರು.

ಶಾರ್ಜಾದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಸೂಪರ್-12 ಹಂತದ ಒಂದನೇ ಗುಂಪಿನ ಪಂದ್ಯದಲ್ಲಿ ಹಸರಂಗ ಸ್ಮರಣೀಯ ಸಾಧನೆ ಮಾಡಿದರು. ಏಡೆನ್ ಮಾರ್ಕರಮ್, ತೆಂಬಾ ಬಾವುಮಾ ಹಾಗೂ ಡ್ವೇನ್ ಪ್ರಿಟೋರಿಯಸ್‌ ವಿಕೆಟ್ ಕಬಳಿಸಿದ ಹಸರಂಗ,ಸ್ಮರಣೀಯಸಾಧನೆ ಮಾಡಿದರು.

ಹಸರಂಗ ಹ್ಯಾಟ್ರಿಕ್ ಹೊರತಾಗಿಯೂ ದಕ್ಷಿಣ ಆಫ್ರಿಕಾ ವಿರುದ್ಧ ಲಂಕಾ ಸೋಲಿಗೆ ಶರಣಾಯಿತು. ಕೊನೆಯ ಓವರ್‌ನಲ್ಲಿ ಡೇವಿಡ್ ಮಿಲ್ಲರ್ ಎರಡು ಸಿಕ್ಸರ್ ಬಾರಿಸಿ ದಕ್ಷಿಣ ಆಫ್ರಿಕಾ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.