ADVERTISEMENT

ಭಾರತ ತಂಡದ ಡ್ರೆಸ್ಸಿಂಗ್ ಕೊಠಡಿ ಎರಡು ಗುಂಪುಗಳಾಗಿ ವಿಂಗಡನೆ: ಕನೇರಿಯಾ

ಐಎಎನ್ಎಸ್
Published 21 ಜನವರಿ 2022, 11:19 IST
Last Updated 21 ಜನವರಿ 2022, 11:19 IST
ಟೀಮ್ ಇಂಡಿಯಾ
ಟೀಮ್ ಇಂಡಿಯಾ   

ನವದೆಹಲಿ: ಭಾರತ ಕ್ರಿಕೆಟ್ ತಂಡದ ಡ್ರೆಸ್ಸಿಂಗ್ ಕೊಠಡಿ ಎರಡು ಗುಂಪುಗಳಾಗಿ ವಿಂಗಡನೆಯಾಗಿವೆ ಎಂಬುದನ್ನು ನಾವು ನೋಡಿದ್ದೇವೆ ಎಂದು ಪಾಕಿಸ್ತಾನದ ಮಾಜಿ ಲೆಗ್ ಸ್ಪಿನ್ನರ್ ದಾನಿಶ್ ಕನೇರಿಯಾ ಹೇಳಿದ್ದಾರೆ.

ಜನವರಿ 19ರಂದು ನಡೆದ ಭಾರತ ಹಾಗೂ ಆತಿಥೇಯ ದಕ್ಷಿಣ ಆಫ್ರಿಕಾ ನಡುವಣ ಮೊದಲ ಏಕದಿನ ಪಂದ್ಯವನ್ನು ಉಲ್ಲೇಖಿಸಿ ಕನೇರಿಯಾ ಇಂತಹದೊಂದು ಹೇಳಿಕೆ ನೀಡಿದ್ದಾರೆ. ಈ ಪಂದ್ಯದಲ್ಲಿ ಭಾರತ ತಂಡವು 31 ರನ್ ಅಂತರದ ಸೋಲು ಅನುಭವಿಸಿತ್ತು.

'ಟೀಮ್ ಇಂಡಿಯಾ ಡ್ರೆಸ್ಸಿಂಗ್ ಕೊಠಡಿ ಎರಡು ಬಣಗಳಾಗಿ ವಿಂಗಡನೆಯಾಗಿವೆ ಎಂಬುದನ್ನು ನಾವು ನೋಡಿದ್ದೇವೆ. ಕೆ.ಎಲ್. ರಾಹುಲ್ ಹಾಗೂ ವಿರಾಟ್ ಕೊಹ್ಲಿ ಪ್ರತ್ಯೇಕವಾಗಿ ಕುಳಿತಿದ್ದರು. ಅಲ್ಲದೆ ಕೊಹ್ಲಿ ನಾಯಕರಾಗಿದ್ದ ಅದೇ ಮೂಡ್‌ನಲ್ಲಿ ಇರಲಿಲ್ಲ. ಆದರೆ ಅವರೊಬ್ಬ ಟೀಮ್ ಪ್ಲೇಯರ್ ಆಗಿದ್ದು, ಮತ್ತಷ್ಟು ಬಲಶಾಲಿಯಾಗಿ ಹಿಂತಿರುಗುವ ನಂಬಿಕೆಯಿದೆ' ಎಂದು ಹೇಳಿದ್ದಾರೆ.

'ಟೆಸ್ಟ್ ಸರಣಿಯನ್ನು ಕಳೆದುಕೊಂಡ ಬಳಿಕ ಭಾರತವು ಏಕದಿನ ಸರಣಿಯಲ್ಲಿ ತಿರುಗೇಟು ನೀಡುವ ನಿರೀಕ್ಷೆಯನ್ನಿಟ್ಟುಕೊಳ್ಳಲಾಗಿತ್ತು. ಆದರೆ ಕಪ್ತಾನ ರಾಹುಲ್ ಅವರಲ್ಲಿ ಗೆಲುವಿಗಾಗಿ ಬದ್ಧತೆ ಕಂಡುಬರಲಿಲ್ಲ' ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.