ADVERTISEMENT

ಮುಂಬೈ ದಾಳಿಗೆ 13 ವರ್ಷ: ಈ ದಿನವನ್ನು ಎಂದಿಗೂ ಮರೆಯಲಾರೆ ಎಂದ ವಿರಾಟ್ ಕೊಹ್ಲಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 26 ನವೆಂಬರ್ 2021, 14:41 IST
Last Updated 26 ನವೆಂಬರ್ 2021, 14:41 IST
ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ   

ಭಾರತದ ಟೆಸ್ಟ್ ಹಾಗೂ ಏಕದಿನ ಕ್ರಿಕೆಟ್‌ ತಂಡದ ನಾಯಕ ವಿರಾಟ್ ಕೊಹ್ಲಿ ಮುಂಬೈ ದಾಳಿ ದುರಂತವನ್ನು ಮರೆಯಲು ಸಾಧ್ಯವಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.

2008ರ ನವೆಂಬರ್ 26ರಂದು ಲಷ್ಕರ್‌–ಎ–ತೈಯಬಾ ಸಂಘಟನೆ ಉಗ್ರರು ಪಾಕಿಸ್ತಾನದಿಂದ ಸಮುದ್ರ ಮಾರ್ಗದ ಮೂಲಕ ಮುಂಬೈ ಪ್ರವೇಶಿಸಿ, ಗುಂಡಿನ ದಾಳಿ ನಡೆಸಿದ್ದರು. ಈ ವೇಳೆ 18 ಜನ ಭದ್ರತಾ ಸಿಬ್ಬಂದಿ ಸೇರಿದಂತೆ 166 ಜನರು ಮೃತಪಟ್ಟಿದ್ದರು.

ಈ ದುರಂತಕ್ಕೆ ಇದೀಗ13 ವರ್ಷ ತುಂಬಿದ ಹಿನ್ನೆಲೆಯಲ್ಲಿಟ್ವೀಟ್ ಮಾಡಿರುವ ಕೊಹ್ಲಿ, ಈ ದಿನವನ್ನು ಮತ್ತು ಪ್ರಾಣ ಕಳೆದುಕೊಂಡವರನ್ನು ನಾವು ಎಂದಿಗೂ ಮರೆಯುವುದಿಲ್ಲ. ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡ ಕುಟುಂಬದವರಿಗೆ ಮತ್ತು ಸ್ನೇಹಿತರಿಗಾಗಿ ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ADVERTISEMENT

ವಿಶ್ರಾಂತಿಯಲ್ಲಿ ವಿರಾಟ್
ನಿರಂತರ ಕ್ರಿಕೆಟ್‌ನಿಂದ ಬಳಲಿರುವ ವಿರಾಟ್, ಸದ್ಯ ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಟಿ20 ಮತ್ತು ಟೆಸ್ಟ್ ಸರಣಿಯ ಮೊದಲ ಪಂದ್ಯದಿಂದ ದೂರ ಉಳಿದಿದ್ದಾರೆ.

ಅವರ ಅನುಪಸ್ಥಿತಿಯಲ್ಲಿ ಭಾರತ ತಂಡ ನ್ಯೂಜಿಲೆಂಡ್ ವಿರುದ್ಧದಮೂರು ಪಂದ್ಯಗಳ ಟಿ20 ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದೆ. ಗುರುವಾರದಿಂದ ಆರಂಭವಾಗಿರುವ ಮೊದಲ ಟೆಸ್ಟ್ ಪಂದ್ಯದ ಒಂದನೇ ಇನಿಂಗ್ಸ್‌ನಲ್ಲಿ ಅಜಿಂಕ್ಯ ರಹಾನೆ ಪಡೆ, 345 ರನ್ ಗಳಿಸಿ ಆಲೌಟ್ ಆಗಿದೆ. ಪದಾರ್ಪಣೆ ಪಂದ್ಯ ಆಡಿದ ಶ್ರೇಯಸ್ ಅಯ್ಯರ್ ಶತಕ (105 ರನ್)ಸಿಡಿಸಿ ಮಿಂಚಿದ್ದಾರೆ.

ಇದಕ್ಕುತ್ತರವಾಗಿ ಇನಿಂಗ್ಸ್ ಆರಂಭಿಸಿರುವ ನ್ಯೂಜಿಲೆಂಡ್ ವಿಕೆಟ್ ನಷ್ಟವಿಲ್ಲದೆ 89 ರನ್ ಗಳಿಸಿ ದಿಟ್ಟ ಆಟವಾಡುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.