ಬಾರ್ಬಡೋಸ್: ಇಲ್ಲಿ ನಡೆಯುತ್ತಿರುವ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು ಭಾರತ ಬೌಲಿಂಗ್ ಆಯ್ಕೆ ಮಾಡಿದೆ.
ಸೂರ್ಯಕುಮಾರ್ ಯಾದವ್ ತಂಡದಲ್ಲಿ ಸ್ಥಾನ ಪಡೆದಿದ್ದು, ಲಯಕ್ಕೆ ಮರಳುವ ವಿಶ್ವಾಸದಲ್ಲಿದ್ದಾರೆ. ಅನಾರೋಗ್ಯ ನಿಮಿತ್ತ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ತವರಿಗೆ ಮರಳಿದ್ದು, ತಂಡದ ಬೌಲಿಂಗ್ ವಿಭಾಗಕ್ಕೆ ದೊಡ್ಡ ಹೊಡೆತ ಬಿದ್ದಿದೆ.
ಉಭಯ ತಂಡಗಳ ಆಡುವ 11ರ ಬಳಗ ಹೀಗಿದೆ
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಇಶಾನ್ ಕಿಶನ್ (ವಿಕೆಟ್‌ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ),ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜ, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಉಮ್ರಾನ್ ಮಲಿಕ್, ಮುಕೇಶ್ ಕುಮಾರ್.
ವೆಸ್ಟ್ ಇಂಡೀಸ್: ಶಾಯ್ ಹೋಪ್ (ನಾಯಕ), ಕೈಲ್ ಮೇಯರ್ಸ್, ಬ್ರೆಂಡನ್ ಕಿಂಗ್, ಅಲಿಕ್ ಅಥಾಂಜೆ, ರೋವ್ಮನ್ ಪೊವೆಲ್, ಶಿಮ್ರೊನ್ ಹೆಟ್ಮೆಯರ್, ರೊಮೆರಿಯೊ ಶೇಫರ್ಡ್, ಯಾನಿಕ್ ಕೆರೈ, ಡಾಮ್ನಿಕ್ ಡ್ರೇಕ್ಸ್, ಜೇಡನ್ ಸೀಲ್ಸ್, ಗುಡಕೇಶ್ ಮೋಟೀ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.