ADVERTISEMENT

ತಂಡದ ಸಂಯೋಜನೆ ಕುರಿತು ಶೀಘ್ರ ನಿರ್ಧಾರ: ಅಜಿಂಕ್ಯ ರಹಾನೆ

ಪಿಟಿಐ
Published 15 ಡಿಸೆಂಬರ್ 2020, 21:41 IST
Last Updated 15 ಡಿಸೆಂಬರ್ 2020, 21:41 IST
ಅಜಿಂಕ್ಯ ರಹಾನೆ
ಅಜಿಂಕ್ಯ ರಹಾನೆ   

ಅಡಿಲೇಡ್‌: ವೇಗಿ ಇಶಾಂತ್ ಶರ್ಮಾ ಅವರ ಅನುಪಸ್ಥಿತಿಯು ತಂಡಕ್ಕೆ ಬಹಳ ಕಾಡಲಿದೆ. ಆದರೆ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೆ ತಂಡದ ಸಂಯೋಜನೆಯ ಶೀಘ್ರ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಭಾರತ ತಂಡದ ಉಪನಾಯಕ ಅಜಿಂಕ್ಯ ರಹಾನೆ ಹೇಳಿದ್ದಾರೆ.

ಮಂಗಳವಾರ ನಡೆದ ವರ್ಚುವಲ್ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡುತ್ತಿದ್ದರು.

‘ನಮ್ಮ ತಂಡದಲ್ಲಿ ಉತ್ತಮ ಬೌಲರ್‌ಗಳಿದ್ದಾರೆ. ಪಕ್ಕೆಲುಬು ಗಾಯದಿಂದ ಬಳಲುತ್ತಿರುವ ಇಶಾಂತ್ ಅವರ ಅನುಪಸ್ಥಿತಿ ಖಂಡಿತವಾಗಿಯೂ ಕಾಡಲಿದೆ‘ ಎಂದಿದ್ದಾರೆ.

ADVERTISEMENT

‘ಲಭ್ಯವಿರುವ ನಾಲ್ವರು ಆರಂಭಿಕ ಬ್ಯಾಟ್ಸ್‌ಮನ್‌ಗಳು (ಮಯಂಕ್ ಅಗರವಾಲ್‌, ಪೃಥ್ವಿ ಶಾ, ಶುಭಮನ್ ಗಿಲ್ ಮತ್ತು ಕೆ.ಎಲ್‌.ರಾಹುಲ್‌), ಇಬ್ಬರು ವಿಕೆಟ್‌ ಕೀಪರ್‌ಗಳಲ್ಲಿ (ವೃದ್ಧಿಮಾನ್ ಸಹಾ ಮತ್ತು ರಿಷಭ್ ಪಂತ್‌) ಯಾರನ್ನು ಕಣಕ್ಕಿಳಿಸಬೇಕು ಎಂಬುದರ ಕುರಿತು ಬುಧವಾರ ನಿರ್ಧಾರ ತೆಗೆದುಕೊಳ್ಳುತ್ತೇವೆ‘ ಎಂದು ರಹಾನೆ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.