ಕೊಲಂಬೊ: ಏಷ್ಯಾ ಕಪ್ ಮಹಿಳಾ ಟಿ20 ಕ್ರಿಕೆಟ್ ಟೂರ್ನಿಯ ಮೊದಲ ಪಂದ್ಯದಲ್ಲಿ ಭಾರತವು ತನ್ನ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು ಎದುರಿಸಲಿದೆ. ಈ ಪಂದ್ಯ ಜುಲೈ 19ರಂದು ಪಂದ್ಯ ದಂಬುಲಾದಲ್ಲಿ ನಡೆಯಲಿದೆ.
ಅತಿಥೇಯ ಶ್ರೀಲಂಕಾ ತನ್ನ ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವನ್ನು ಎದುರಿಸಲಿದೆ ಎಂದು ಶ್ರೀಲಂಕಾ ಕ್ರಿಕೆಟ್ ಮಂಡಳಿ ಶುಕ್ರವಾರ ತಿಳಿಸಿದೆ.
ಟೂರ್ನಿಯಲ್ಲಿ ಒಟ್ಟು ಎಂಟು ತಂಡಗಳು ಭಾಗವಹಿಸುತ್ತಿವೆ. ನಾಕೌಟ್ ತಲುಪುವ ನಿರೀಕ್ಷೆ ಹೊಂದಿರುವ ಭಾರತ, ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಶ್ರೀಲಂಕಾ ತಂಡಗಳ ಜೊತೆಗೆ ಯುಎಇ, ನೇಪಾಳ, ಮಲೇಷ್ಯಾ ಹಾಗೂ ಥಾಯ್ಲೆಂಡ್ ತಂಡಗಳು ಕಣದಲ್ಲಿವೆ.
‘ಎ’ ಗುಂಪಿನಲ್ಲಿ ಭಾರತದ ಜೊತೆ ಪಾಕಿಸ್ತಾನ, ಯುಎಇ, ನೇಪಾಳ ತಂಡಗಳಿವೆ. ‘ಬಿ’ ಗುಂಪಿನಲ್ಲಿ ಬಾಂಗ್ಲಾದೇಶ, ಶ್ರೀಲಂಕಾ, ಮಲೇಷ್ಯಾ ಹಾಗೂ ಥಾಯ್ಲೆಂಡ್ ತಂಡಗಳಿವೆ.
ಫೈನಲ್ ಮತ್ತು ಸೆಮಿಫೈನಲ್ ಪಂದ್ಯಗಳು ಸೇರಿದಂತೆ ಒಟ್ಟು 15 ಪಂದ್ಯಗಳು ನಡೆಯಲಿವೆ.
‘ಕ್ರಿಕೆಟ್ ಅಭಿಮಾನಿಗಳಿಗೆ ಉಚಿತವಾಗಿ ಪಂದ್ಯ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ’ ಎಂದು ಮಾಧ್ಯಮ ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.