ದಂಬುಲಾ (ಶ್ರೀಲಂಕಾ): ಮಹಿಳೆಯರ ಏಷ್ಯಾ ಕಪ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಇಂದು 'ಎ' ಗುಂಪಿನಲ್ಲಿ ನೇಪಾಳ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿರುವ ಭಾರತ ಮೂರು ವಿಕೆಟ್ ನಷ್ಟಕ್ಕೆ 178 ರನ್ ಗಳಿಸಿದೆ.
ಈ ಪಂದ್ಯದಲ್ಲಿ ಭಾರತದ ನಾಯಕಿ ಹರ್ಮನ್‌ಪ್ರೀತ್ ಕೌರ್ ಅವರಿಗೆ ವಿಶ್ರಾಂತಿ ಸೂಚಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ತಂಡವನ್ನು ಸ್ಮೃತಿ ಮಂದಾನ ಮುನ್ನಡೆಸಿದರು.
ಶೆಫಾಲಿ ವರ್ಮಾ ಹಾಗೂ ದಯಾಲನ್ ಹೇಮಲತಾ ಮೊದಲ ವಿಕೆಟ್‌ಗೆ 14 ಓವರ್‌ಗಳಲ್ಲಿ 122 ರನ್‌ಗಳ ಜೊತೆಯಾಟದ ಮೂಲಕ ಭದ್ರ ಅಡಿಪಾಯ ಹಾಕಿಕೊಟ್ಟರು.
ಕೇವಲ 26 ಎಸೆತಗಳಲ್ಲಿ ಅರ್ಧಶತಕ ಗಳಿಸಿದ ಶೆಫಾಲಿ, ಅಬ್ಬರಿಸಿದರು. ಇದು ಟ್ವೆಂಟಿ-20 ಕ್ರಿಕೆಟ್‌ನಲ್ಲಿ ಶೆಫಾಲಿ ಗಳಿಸಿದ 10ನೇ ಅರ್ಧಶತಕವಾಗಿದೆ. ಅಂತಿಮವಾಗಿ 48 ಎಸೆತಗಳಲ್ಲಿ 81 ರನ್ ಗಳಿಸಿ ಔಟ್ ಆದರು. ಅವರ ಇನಿಂಗ್ಸ್‌ನಲ್ಲಿ 12 ಬೌಂಡರಿ ಹಾಗೂ ಒಂದು ಸಿಕ್ಸರ್ ಸೇರಿತ್ತು.
ಹೇಮಲತಾ 47 ರನ್ ಗಳಿಸಿ ಮಿಂಚಿದರು. ಕೊನೆಯ ಹಂತದಲ್ಲಿ ಜೆಮಿಮಾ ರಾಡ್ರಿಗಸ್ ಅಜೇಯ 28 ರನ್‌ಗಳ ಉಪಯುಕ್ತ ಕಾಣಿಕೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.