ರಾಜ್‌ಕೋಟ್: ಇಂಗ್ಲೆಂಡ್ ಬೌಲರ್‌ಗಳೆದುರು ಲೀಲಾಜಾಲವಾಗಿ ಬ್ಯಾಟ್ ಬೀಸಿದ ಭಾರತದ ಯುವ ಬ್ಯಾಟರ್ ಯಶಸ್ವಿ ಜೈಸ್ವಾಲ್ ಶನಿವಾರ ಶತಕ ಸಿಡಿಸಿ ಸಂಭ್ರಮಿಸಿದರು.
ಈ ಸರಣಿಯಲ್ಲಿನ ಮೂರನೇ ಶತಕ ಇದಾಗಿದೆ. ವಿಶಾಖಪಟ್ಟಣದಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ದ್ವಿಶತಕ ಸಿಡಿಸಿದ್ದರು. ಈ ಪಂದ್ಯವನ್ನು ಭಾರತ ಗೆದ್ದುಕೊಂಡಿತ್ತು.
ರಾಜ್‌ಕೋಟ್‌ನಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 10 ರನ್ ಗಳಿಸಿ ಔಟಾಗಿದ್ದರು. ಎರಡನೇ ಇನ್ನಿಂಗ್ಸ್‌ನಲ್ಲಿ 122 ಬಾಲ್‌ಗಳಲ್ಲಿ ಶತಕ ಸಿಡಿಸಿದರು. ಅವರು 104 ರನ್‌ಗಳಿಸಿದ್ದಾಗ ಗಾಯಗೊಂಡು ರಿಟೇರ್ಡ್ ಹರ್ಟ್ ಆಗಿ ಹೊರನಡೆದರು.
ಮೂರನೇ ದಿನದಾಟದ ಅಂತ್ಯಕ್ಕೆ ಭಾರತ ಎರಡನೇ ಇನ್ನಿಂಗ್ಸ್‌ನಲ್ಲಿ ಎರಡು ವಿಕೆಟ್ ಕಳೆದುಕೊಂಡು 195 ರನ್ ಗಳಿಸಿದೆ. ರೋಹಿತ್ ಶರ್ಮಾ 19, ಪಾಟೀದಾರ್ ಶೂನ್ಯಕ್ಕೆ ಔಟಾಗಿದ್ದಾರೆ. ಶುಭುಮನ್ ಗಿಲ್ 65 ರನ್‌ಗಳಿಸಿ ಆಡುತ್ತಿದ್ದಾರೆ.
ಭಾರತ ತಂಡ 322 ರನ್‌ಗಳ ಮುನ್ನಡೆ ಗಳಿಸಿದೆ.
ಸ್ಕೋರ್...
ಭಾರತ: 445 (ಮೊದಲ ಇನ್ನಿಂಗ್ಸ್) ಮತ್ತು 196/2 (ಎರಡನೇ ಇನ್ನಿಂಗ್ಸ್)
ಇಂಗ್ಲೆಂಡ್: 319 (ಮೊದಲ ಇನ್ನಿಂಗ್ಸ್)
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.