ದೆಹಲಿ: ಭಾರತದ ಮಾಜಿ ಆಲ್‌ರೌಂಡರ್ ಯುವರಾಜ್ ಸಿಂಗ್ ಅವರು ಮತ್ತೆ ಪಿಚ್‌ನಲ್ಲಿ ಕಾಣಿಸಿಕೊಳ್ಳುವುದಾಗಿ ಮಂಗಳವಾರ ಘೋಷಿಸಿದ್ದಾರೆ.
ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಅವರು ಈ ವಿಷಯವನ್ನು ಹಂಚಿಕೊಂಡಿದ್ದಾರೆ.
‘ಭವಿಷ್ಯವನ್ನು ದೇವರು ನಿರ್ಧರಿಸುತ್ತಾನೆ. ಜನರ ಬೇಡಿಕೆಯ ಮೇರೆಗೆ ನಾನು ಫೆಬ್ರುವರಿಯಲ್ಲಿ ಮತ್ತೆ ಪಿಚ್‌ಗೆ ಮರಳಲಿದ್ದೇನೆ. ನಿಮ್ಮ ಪ್ರೀತಿ ಮತ್ತು ಶುಭ ಕೋರಿಕೆಗೆ ಧನ್ಯವಾದಗಳು. ಭಾರತವನ್ನು ಬೆಂಬಲಿಸುತ್ತಿರಿ. ಇದು ನಮ್ಮ ತಂಡ. ನಿಜವಾದ ಅಭಿಮಾನಿಗಳು ಕಠಿಣ ಸಮಯದಲ್ಲೂ ಬೆಂಬಲವಾಗಿರುತ್ತಾರೆ,’ ಎಂದು ಅವರು ಬರೆದುಕೊಂಡಿದ್ದಾರೆ.
ಇದನ್ನೂ ಓದಿ:PV Web Exclusive: ಸಿಕ್ಸರ್ವೀರರು...
2011ರ ವಿಶ್ವಕಪ್‌ನಲ್ಲಿ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಅದ್ಭುತ ಪ್ರದರ್ಶನ ನೀಡಿದ್ದ ಯುವರಾಜ್ ಸಿಂಗ್ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದರು. ಯುವರಾಜ್ 90.50ರ ಸರಾಸರಿಯಲ್ಲಿ 362 ರನ್ ಗಳಿಸಿದ್ದಲ್ಲದೇ, 15 ವಿಕೆಟ್‌ಗಳನ್ನೂ ಪಡೆದಿದ್ದರು. ಯುವರಾಜ್ 2011ರ ವಿಶ್ವಕಪ್‌ನಲ್ಲಿ ತಮ್ಮ ಕ್ರಿಕೆಟ್ ವೃತ್ತಿ ಜೀವನದ ಉತ್ತುಂಗದಲ್ಲಿದ್ದರಾದರೂ, ವಿಶ್ವಕಪ್ ಕೂಟ ಮುಕ್ತಾಯಗೊಂಡ ಕೆಲವೇ ದಿನಗಳಲ್ಲಿ ಕ್ಯಾನ್ಸರ್‌ನಿಂದ ಬಳಲಿದರು.
ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾದ ನಂತರ ಜಗತ್ತಿನ ಹಲವು ಫ್ರಾಂಚೈಸಿ ಕ್ರಿಕೆಟ್‌ನಲ್ಲಿ ಯುವರಾಜ್ ಆಡಿದ್ದಾರೆ. ಜಿಟಿ 20 ಲೀಗ್‌ನಲ್ಲಿ ಟೊರೊಂಟೊ ನ್ಯಾಷನಲ್ಸ್ ಅನ್ನು ಪ್ರತಿನಿಧಿಸಿದ್ದಾರೆ. ಅಬುಧಾಬಿ ಟಿ10ನಲ್ಲಿ ಅವರು ಮರಾಠ ಅರೇಬಿಯನ್ಸ್‌ಗಾಗಿ ಆಡಿದ್ದಾರೆ.
ಯುವರಾಜ್ ಸಿಂಗ್ ಭಾರತಕ್ಕಾಗಿ ಅಥವಾ ಟಿ 20 ಲೀಗ್‌ಗಳಲ್ಲಿ ಆಡಲು ಮರಳುತ್ತಾರೆಯೇ ಎಂಬುದು ಇನ್ನೂ ಅಸ್ಪಷ್ಟವಾಗಿದ್ದರೂ, ಕ್ರಿಕೆಟ್ ಪಿಚ್‌ನಲ್ಲಿ ಸ್ಟಾರ್ ಬ್ಯಾಟರ್ ಅನ್ನು ಮತ್ತೊಮ್ಮೆ ಕಂಣ್ತುಬಿಕೊಳ್ಳಲು ಅಭಿಮಾನಿಗಳು ಕಾತರದಲ್ಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.