ADVERTISEMENT

ಬಿಡಿಎಫ್‌ಎ ಸೂಪರ್ ಡಿವಿಷನ್‌ ಫುಟ್‌ಬಾಲ್‌: ಡ್ರಾ ಪಂದ್ಯದಲ್ಲಿ ಎಎಸ್‌ಸಿ

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2024, 4:42 IST
Last Updated 19 ಅಕ್ಟೋಬರ್ 2024, 4:42 IST
<div class="paragraphs"><p>ಫುಟ್‌ಬಾಲ್‌</p></div>

ಫುಟ್‌ಬಾಲ್‌

   

ಬೆಂಗಳೂರು: ಎಎಸ್‌ಸಿ ಅಂಡ್‌ ಸೆಂಟರ್‌ ಎಫ್‌ಸಿ ತಂಡವು ಬಿಡಿಎಫ್‌ಎ ಸೂಪರ್ ಡಿವಿಷನ್‌ ಫುಟ್‌ಬಾಲ್‌ ಟೂರ್ನಿಯ ಪಂದ್ಯದಲ್ಲಿ 2–2 ಗೋಲುಗಳಿಂದ ರೆಬೆಲ್ಸ್‌ ಎಫ್‌ಸಿ ವಿರುದ್ಧ ಡ್ರಾ ಸಾಧಿಸಿತು.

ಬೆಂಗಳೂರು ಫುಟ್‌ಬಾಲ್‌ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ಎಎಸ್‌ಸಿ ಪರ ಸೋಮೇಶ್‌ ಕೊಠಾರಿ (35ನೇ ನಿಮಿಷ) ಮತ್ತು ಟಿ.ಕೃಷ್ಣಕಾಂತ ಸಿಂಗ್ (45+2ನೇ) ಗೋಲು ಗಳಿಸಿದರು. ರೆಬೆಲ್ಸ್‌ ಪರ ಸಂಜಯ್‌ ಎಸ್‌ (54ನೇ ಮತ್ತು 68ನೇ) ಡಬಲ್ಸ್‌ ಗೋಲು ದಾಖಲಿಸಿದರು.

ADVERTISEMENT

ದಿನದ ಮತ್ತೊಂದು ಪಂದ್ಯದಲ್ಲಿ ಬೆಂಗಳೂರು ಇಂಡಿಪೆಂಡೆಂಟ್ಸ್‌ ಎಫ್‌ಸಿ ತಂಡವು 1–1ರಿಂದ ಎಂಇಜಿ ಅಂಡ್ ಸೆಂಟರ್‌ ಎಫ್‌ಸಿ ತಂಡದೊಂದಿಗೆ ಡ್ರಾ ಸಾಧಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.