ನವದೆಹಲಿ: ಭಾರತ ಫುಟ್‌ಬಾಲ್ ತಂಡದ ಮಾಜಿ ಡಿಫೆಂಡರ್ ಪ್ರಬೀರ್ ಮಜುಂದಾರ್ (77) ಅನಾರೋಗ್ಯದಿಂದ ಗುರುವಾರ ನಿಧನರಾದರು. ಅವರಿಗೆ ಪತ್ನಿ ಮತ್ತು ಪುತ್ರ ಇದ್ದಾರೆ.
ಟೆಹ್ರಾನ್‌ನಲ್ಲಿ ನಡೆದ 1974ರ ಏಷ್ಯನ್ ಕ್ರೀಡಾಕೂಟದಲ್ಲಿ ಅವರು ಭಾರತ ತಂಡವನ್ನು ಪ್ರತಿನಿಧಿಸಿದ್ದರು.
1960–1970ರ ದಶಕದಲ್ಲಿ ದೇಶೀಯ ಫುಟ್‌ಬಾಲ್‌ನಲ್ಲಿ ಸಕ್ರಿಯವಾಗಿದ್ದ ಅವರು, ಈಸ್ಟ್ ಬೆಂಗಾಲ್ ಮತ್ತು ಈಸ್ಟರ್ನ್ ರೈಲ್ವೇಸ್‌ನ ತಂಡವನ್ನು ಪ್ರತಿನಿಧಿಸಿದ್ದರು. ಪ್ರಬೀರ್ ಅವರಿದ್ದ ಈಸ್ಟ್ ಬೆಂಗಾಲ್ ತಂಡವು ಕೋಲ್ಕತ್ತ ಫುಟ್‌ಬಾಲ್ ಲೀಗ್, ಐಎಫ್‌ಎ ಶೀಲ್ಡ್, ಡುರಾಂಡ್ ಕಪ್‌ಮ ರೋವರ್ಸ್ ಕಪ್ ಸೇರಿದಂತೆ ಹಲವು ಟೂರ್ನಿಗಳಲ್ಲಿ ಪ್ರಶಸ್ತಿ ಗೆದ್ದಿದೆ.
‘ಅಂದಿನ ಕಾಲಘಟ್ಟದಲ್ಲಿ ಪ್ರಬೀರ್ ಮಜುಂದಾರ್ ಅವರು ವಿಶ್ವಾಸಾರ್ಹ ಮತ್ತು ಗೌರವಾನ್ವಿತ ಡಿಫೆಂಡರ್‌ಗಳಲ್ಲಿ ಒಬ್ಬರು. ಸ್ಟಾರ್ ಆಟಗಾರರಾಗಿ ಗುರುತಿಸಿಕೊಂಡಿದ್ದರು’ ಎಂದು ಅಖಿಲ ಭಾರತ ಫುಟ್‌ಬಾಲ್ ಫೆಡರೇಷನ್‌ನ ಅಧ್ಯಕ್ಷ ಕಲ್ಯಾಣ್ ಚೌಬೆ ಸ್ಮರಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.