ತಾಷ್ಕೆಂಟ್: ಅತ್ಯುತ್ತಮ ಸಾಮರ್ಥ್ಯ ತೋರಿದ ಅಜಯ್ ಸಿಂಗ್ ಅವರು ಕಾಮನ್‌ವೆಲ್ತ್ ವೇಟ್‌ಲಿಫ್ಟಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. ಇದರೊಂದಿಗೆ 2022ರ ಕಾಮನ್‌ವೆಲ್ತ್ ಕ್ರೀಡಾಕೂಟಕ್ಕೂ ಅರ್ಹತೆ ಗಳಿಸಿದರು.
ಪುರುಷರ 81 ಕೆಜಿ ವಿಭಾಗದಲ್ಲಿ ಸ್ಪರ್ಧಿಸಿದ್ದ ಅಜಯ್ ಭಾನುವಾರ ರಾತ್ರಿ ಒಟ್ಟು 322 ಕೆಜಿ ಭಾರ ಎತ್ತಿದರು. ಈ ಮೂಲಕ ಸ್ನ್ಯಾಚ್ (147 ಕೆಜಿ) ರಾಷ್ಟ್ರೀಯ ದಾಖಲೆಯನ್ನು ಬರೆದರು.
ಚಾಂಪಿಯನ್‌ಷಿಪ್‌ನಲ್ಲಿ ಭಾರತಕ್ಕೆ ಒಲಿದ ಮೂರನೇ ಚಿನ್ನದ ಪದಕ ಇದು.
ಮಹಿಳೆಯರ 59 ಕೆಜಿ ವಿಭಾಗದಲ್ಲಿ ಕಣಕ್ಕಿಳಿದಿದ್ದ ಪೋಪಿ ಹಜಾರಿಕಾ ಅವರು ಬೆಳ್ಳಿ ಪದಕಕ್ಕೆ ಮುತ್ತಿಟ್ಟರು. ಅವರು ಒಟ್ಟು 189 ಕೆಜಿ (84+105) ಸಾಧನೆ ಮಾಡಿದರು.
ಅಜಯ್ ಅವರು ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯಲಿರುವ ಚಾಂಪಿಯನ್‌ಷಿಪ್‌ಗೆ ನೇರ ಅರ್ಹತೆ ಗಿಟ್ಟಿಸಿದ ಭಾರತದ ಮೂರನೇ ವೇಟ್‌ಲಿಫ್ಟರ್ ಎನಿಸಿಕೊಂಡರು.
ಜೆರೆಮಿ ಲಾಲ್‌ರಿನ್ನುಂಗಾ (67 ಕೆಜಿ ವಿಭಾಗ) ಮತ್ತು ಅಚಿಂತ ಶೆವುಲಿ (73 ಕೆಜಿ) ಚಾಂಪಿಯನ್‌ಷಿಪ್‌ನಲ್ಲಿ ಈಗಾಗಲೇ ಚಿನ್ನ ಗೆದ್ದು ಕಾಮನ್‌ವೆಲ್ತ್ ಕ್ರೀಡಾಕೂಟಕ್ಕೆ ಪ್ರವೇಶ ಪಡೆದಿದ್ದಾರೆ.
ಇಲ್ಲಿ ಪ್ರತಿ ವಿಭಾಗದಲ್ಲಿ ಚಿನ್ನದ ಪದಕ ಜಯಿಸುವ ವೇಟ್‌ಲಿಫ್ಟರ್‌ಗಳು ಕಾಮನ್‌ವೆಲ್ತ್ ಗೇಮ್ಸ್‌ಗೆ ನೇರ ಪ್ರವೇಶ ಗಳಿಸಲಿದ್ದಾರೆ. ಇನ್ನುಳಿದವರು ರ‍್ಯಾಂಕಿಂಗ್ ಮೂಲಕ ಅರ್ಹತೆ ಗಳಿಸಬಹುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.