ನವದೆಹಲಿ: ನಾಲ್ಕು ಬಾರಿ ‘ಮಿಸ್ಟರ್ ಇಂಡಿಯಾ’ ದೇಹದಾರ್ಢ್ಯ ಪ್ರಶಸ್ತಿಯನ್ನು ಗೆದ್ದಿದ್ದ ದೇಹದಾರ್ಢ್ಯ ಪಟು ಆಶಿಶ್ ಸಖರ್ಕರ್ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಆಶಿಶ್ ಅವರಿಗೆ 43 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕಳೆದ ಒಂದು ವಾರದಿಂದ ಮುಂಬೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು.
ಸಖರ್ಕರ್ ಪತ್ನಿ ಹಾಗೂ ಒಬ್ಬ ಪುತ್ರನನ್ನು ಅಗಲಿದ್ದಾರೆ. ಸಖರ್ಕರ್ ಅವರ ಅಂತ್ಯಕ್ರಿಯೆ ಇಂದು ಸಂಜೆ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
80 ಕೆ.ಜಿ. ವಿಭಾಗದಲ್ಲಿ ಬಾಡಿ ಬಿಲ್ಡರ್ ಆಗಿದ್ದ ಸಖರ್ಕರ್ ಅವರು ಅನೇಕ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಮಹಾರಾಷ್ಟ್ರ ಸರ್ಕಾರದ ‘ಶಿವ ಛತ್ರಪತಿ ಪ್ರಶಸ್ತಿ’ಯನ್ನು ಪಡೆದಿದ್ದಾರೆ.
ಆಶಿಶ್ ಸಖರ್ಕರ್ ನಿಧನಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಟ್ವಿಟರ್‌ನಲ್ಲಿ ಸಂತಾಪ ಸೂಚಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.