ಗುವಾಹಟಿ: ಅಂತರರಾಷ್ಟ್ರೀಯ ಅಥ್ಲೀಟ್ ಹಿಮಾ ದಾಸ್ ಅವರು ಅಸ್ಸಾಂ ಪೊಲೀಸ್ ಇಲಾಖೆಯಲ್ಲಿ ಶುಕ್ರವಾರ ಡೆಪ್ಯುಟಿ ಸೂಪರಿಟೆಂಡೆಂಟ್ (ಡಿಎಸ್‌ಪಿ)ಆಗಿ ಅಧಿಕಾರ ಸ್ವೀಕರಿಸಿದರು.
ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೊನೊವಾಲ್ ಅವರು ಹಿಮಾಗೆ ನೇಮಕಪತ್ರ ಪ್ರದಾನ ಮಾಡಿದರು. ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳು ಈ ಸಂದರ್ಭದಲ್ಲಿ ಇದ್ದರು.
ಇದನ್ನೂ ಓದಿ:ರಾಷ್ಟ್ರಗೀತೆ ಮೊಳಗಿದಾಗ ಭಾವುಕಳಾದೆ: ಹಿಮಾ ದಾಸ್
’ಶಾಲೆಯ ದಿನಗಳಿಂದಲೂ ಪೊಲೀಸ್ ಅಧಿಕಾರಿಯಾಗಬೇಕೆಂಬ ಕನಸು ಕಂಡಿದ್ದೆ. ಅದೀಗ ಈಡೇರಿದೆ. ಆದರೆ, ಭಾರತ ದೇಶದ ಅಥ್ಲೆಟಿಕ್ಸ್ ತಂಡದಲ್ಲಿ ಮುಂದುವರಿಯುತ್ತೇನೆ. ಅಂತರರಾಷ್ಟ್ರೀಯ ಮತ್ತು ಒಲಿಂಪಿಕ್ ಕೂಟದಲ್ಲಿ ಭಾರತಕ್ಕೆ ಪದಕ ಗೆದ್ದುಕೊಡುವುದು ನನ್ನ ಗುರಿ‘ ಎಂದು ಹಿಮಾ ಹೇಳಿದರು.
ಇದನ್ನೂ ಓದಿ:ಹಿಮಾ ಸಾಧನೆಗೆಬಾಲಿವುಡ್ ಮೆಚ್ಚುಗೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.