ಕುಮಮೊಟೊ (ಜಪಾನ್): ಎರಡು ಬಾರಿಯ ಒಲಿಂಪಿಕ್ ಪದಕ ವಿಜೇತೆ ಪಿ.ವಿ. ಸಿಂಧು, ಕುಮಾಮೊಟೊ ಮಾಸ್ಟರ್ಸ್ ಜಪಾನ್ ಸೂಪರ್ 500 ಬ್ಯಾಡ್ಮಿಂಟನ್ ಟೂರ್ನಿಯ ಪ್ರಿ ಕ್ವಾರ್ಟರ್ಫೈನಲ್ನಲ್ಲಿ ಸೋಲನುಭವಿಸಿದರು. ಇದರೊಂದಿಗೆ ಈ ಟೂರ್ನಿಯಲ್ಲಿ ಭಾರತದ ಸವಾಲು ಅಂತ್ಯಗೊಂಡಿತು.
ವಿಶ್ವಕ್ರಮಾಂಕದಲ್ಲಿ 20ನೇ ಸ್ಥಾನದಲ್ಲಿರುವ ಸಿಂಧು ಗುರುವಾರ ನಡೆದ ಮಹಿಳಾ ಸಿಂಗಲ್ಸ್ ಎರಡನೇ ಸುತ್ತಿನ ಪಂದ್ಯದಲ್ಲಿ 21–17, 16–21, 17–21 ರಲ್ಲಿ ಕೆನಡಾದ ಮಿಚೆಲ್ ಲಿ ಎದುರು ಸೋಲನುಭವಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.