ADVERTISEMENT

Paris Olympics | ಭಾರತೀಯ ಕ್ರೀಡಾಪಟುಗಳಿಗೆ ಬಿಸಿಸಿಐ ₹8.5 ಕೋಟಿ ನೆರವು

ಪಿಟಿಐ
Published 21 ಜುಲೈ 2024, 14:03 IST
Last Updated 21 ಜುಲೈ 2024, 14:03 IST
<div class="paragraphs"><p>ಪ್ಯಾರಿಸ್ ಒಲಿಂಪಿಕ್ಸ್</p></div>

ಪ್ಯಾರಿಸ್ ಒಲಿಂಪಿಕ್ಸ್

   

(ರಾಯಿಟರ್ಸ್ ಚಿತ್ರ)

ಬೆಂಗಳೂರು: ಪ್ಯಾರಿಸ್ ಒಲಿಂಪಿಕ್ಸ್ 2024 ಕ್ರೀಡಾಕೂಟದಲ್ಲಿ ಭಾಗವಹಿಸುವ ಭಾರತೀಯ ಕ್ರೀಡಾಪಟುಗಳಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ₹8.5 ಕೋಟಿ ನೆರವನ್ನು ಘೋಷಿಸಿದೆ.

ADVERTISEMENT

ಈ ಕುರಿತು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ, ಸಾಮಾಜಿಕ ಮಾಧ್ಯಮ 'ಎಕ್ಸ್‌'ನಲ್ಲಿ ಪ್ರಕಟಿಸಿದ್ದಾರೆ.

'2024ರ ಪ್ಯಾರಿಸ್ ಒಲಂಪಿಕ್ಸ್‌ನಲ್ಲಿ ದೇಶವನ್ನು ಪ್ರತಿನಿಧಿಸುವ ನಮ್ಮ ಅದ್ಭುತ ಕ್ರೀಡಾಪಟುಗಳನ್ನು ಬಿಸಿಸಿಐ ಬೆಂಬಲಿಸುತ್ತದೆ ಎಂದು ಘೋಷಿಸಲು ನಾನು ಹೆಮ್ಮೆಪಟ್ಟುಕೊಳ್ಳುತ್ತೇನೆ. ಭಾರತದ ಅಭಿಯಾನಕ್ಕಾಗಿ ನಾವು ಭಾರತ ಒಲಿಂಪಿಕ್ ಸಂಸ್ಥೆಗೆ (ಐಒಎ) ₹8.5 ಕೋಟಿ ನೆರವನ್ನು ಒದಗಿಸುತ್ತೇವೆ. ನಮ್ಮ ಇಡೀ ತಂಡವನ್ನು ಶುಭ ಹಾರೈಸುತ್ತೇನೆ. ಭಾರತ ಹೆಮ್ಮೆಪಡುವಂತೆ ಮಾಡಿ' ಎಂದು ಜಯ್ ಶಾ ಬರೆದಿದ್ದಾರೆ.

ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ದೇಶವನ್ನು 117 ಕ್ರೀಡಾಪಟುಗಳು ಪ್ರತಿನಿಧಿಸಲಿದ್ದಾರೆ ಎಂದು ಐಒಎ ಈಗಾಗಲೇ ಘೋಷಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.