ADVERTISEMENT

ಕ್ರೀಡಾ ಕೋಟಾ: ಕೇಂದ್ರ ಸರ್ಕಾರದಿಂದ ಮಾರ್ಗಸೂಚಿ ಪರಿಷ್ಕರಣೆ

ಪಿಟಿಐ
Published 5 ಮಾರ್ಚ್ 2024, 23:30 IST
Last Updated 5 ಮಾರ್ಚ್ 2024, 23:30 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ನವದೆಹಲಿ: ಈಚೆಗಿನ ದಿನಗಳಲ್ಲಿ ಜನಪ್ರಿಯತೆ ಪಡೆದ ಕ್ರೀಡೆಗಳನ್ನು ಸೇರಿಸಿಕೊಳ್ಳಲು ಮತ್ತು ಕ್ರೀಡಾಪಟುಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲು, ಕೇಂದ್ರ ಸರ್ಕಾರವು ಕ್ರೀಡಾ ಕೋಟಾದಡಿ ನೇಮಕಾತಿ ಮತ್ತು ಬಡ್ತಿಗೆ ಸಂಬಂಧಿಸಿದ ಮಾರ್ಗಸೂಚಿಗಳನ್ನು ಪರಿಷ್ಕರಿಸಿದೆ. 

‘ಕೇಂದ್ರ ಕ್ರೀಡಾ ಸಚಿವಾಲಯದ ಜತೆಗೆ ಸಮಾಲೋಚನೆ ನಡೆಸಿ ಮಾರ್ಗಸೂಚಿಗಳನ್ನು ಪರಿಷ್ಕರಿಸಲಾಗಿದೆ. ಸರ್ಕಾರಿ ಉದ್ಯೋಗಗಳಲ್ಲಿ ಕ್ರೀಡಾ ಕೋಟಾದಡಿ ನೇಮಕಾತಿ ಪ್ರಕ್ರಿಯೆಗೆ ಇನ್ನಷ್ಟು ಸ್ಪಷ್ಟತೆ ತರುವುದು ಇದರ ಉದ್ದೇಶ. ಇತ್ತೀಚಿನ ದಿನಗಳಲ್ಲಿ ಹೆಚ್ಚು ಮಹತ್ವ ಪಡೆದುಕೊಂಡಿರುವ ಕ್ರೀಡೆಗಳನ್ನು ಸೇರಿಸಿಕೊಳ್ಳುವುದು ಮತ್ತು ಕ್ರೀಡೆಗಳಲ್ಲಿ ಗಮನಾರ್ಹ ಪ್ರದರ್ಶನ ತೋರುವವರಿಗೆ ಉತ್ತೇಜನ ನೀಡುವುದು ಗುರಿ’ ಎಂದು ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಹೇಳಿದೆ.

ADVERTISEMENT

‘ಮಾನ್ಯತೆ ಹೊಂದಿರುವ ರಾಷ್ಟ್ರೀಯ ಕ್ರೀಡಾ ಫೆಡರೇಷನ್‌ಗಳು ವೈಯಕ್ತಿಕ ಕ್ರೀಡೆಗಳಲ್ಲಿ ಆಯೋಜಿಸುವ ಚಾಂಪಿಯನ್‌ಷಿಪ್‌ಗಳು ಮತ್ತು ಟೂರ್ನಿಗಳು, ಭಾರತ ಒಲಿಂಪಿಕ್‌ ಸಂಸ್ಥೆ ಏರ್ಪಡಿಸುವ ರಾಷ್ಟ್ರೀಯ ಕ್ರೀಡಾಕೂಟ, ಖೇಲೊ ಇಂಡಿಯಾ ಯೂನಿವರ್ಸಿಟಿ ಗೇಮ್ಸ್, ಖೇಲೊ ಇಂಡಿಯಾ ಯೂತ್‌ ಗೇಮ್ಸ್‌, ಖೇಲೊ ಇಂಡಿಯಾ ಚಳಿಗಾಲದ ಕ್ರೀಡಾಕೂಟ ಮತ್ತು ಖೇಲೊ ಇಂಡಿಯಾ ಪ್ಯಾರಾ ಕ್ರೀಡಾಕೂಟಗಳನ್ನು ಪರಿಗಣಿಸಲಾಗುವುದು’ ಎಂದು ತಿಳಿಸಿದೆ.

‘ಚೆಸ್‌ನಲ್ಲಿ ಗ್ರ್ಯಾಂಡ್‌ ಮಾಸ್ಟರ್‌ (ಜಿಎಂ), ಇಂಟರ್‌ನ್ಯಾಷನಲ್‌ ಮಾಸ್ಟರ್‌ (ಐಎಂ) ಎನಿಸಿಕೊಂಡವರು ಮತ್ತು ಚೆಸ್‌ ಒಲಿಂಪಿಯಾಡ್‌ನಲ್ಲಿ ಪಾಲ್ಗೊಂಡವರಿಗೆ ಆದ್ಯತೆ ನೀಡಲಾಗುವುದು. ರಾಷ್ಟ್ರೀಯ ಓಪನ್‌ ಚೆಸ್‌ ಚಾಂಪಿಯನ್‌ಷಿಪ್‌ಅನ್ನು ರಾಷ್ಟ್ರೀಯ ಚಾಂಪಿಯನ್‌ಷಿಪ್‌ ಎಂದು ಪರಿಗಣಿಸಲಾಗುತ್ತದೆ. ರಾಷ್ಟ್ರೀಯ ತಂಡ ಚೆಸ್‌ ಚಾಂಪಿಯನ್‌ಷಿಪ್‌ನಲ್ಲಿ ಪದಕ ಗೆದ್ದವರನ್ನೂ ನೇಮಕಾತಿಗೆ ಪರಿಗಣಿಸಲಾಗುತ್ತದೆ’ ಎಂದು ಆದೇಶದಲ್ಲಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.