ನವದೆಹಲಿ: ಬೀಜಿಂಗ್‌ನಲ್ಲಿ ನಡೆಯುತ್ತಿರುವ ಚಳಿಗಾಲದ ಒಲಿಂಪಿಕ್ಸ್‌ನ ಉದ್ಘಾಟನಾ ಹಾಗೂ ಸಮಾರೋಪ ಸಮಾರಂಭವನ್ನು ಭಾರತ ಬಹಿಷ್ಕರಿಸಲಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಗುರುವಾರ ತಿಳಿಸಿದೆ.
ಇದರೊಂದಿಗೆ ಗಾಲ್ವನ್ ಘರ್ಷಣೆಗೆ ಸಂಬಂಧಿಸಿದಂತೆ ಹೊಸ ವಿವಾದ ಭುಗಿಲೆದ್ದಿದೆ.
ಗಾಲ್ವನ್ ಕಣಿವೆಯ ಘರ್ಷಣೆಯಲ್ಲಿ ಭಾಗಿಯಾಗಿದ್ದ ಚೀನಾದ ಸೈನಿಕನೊಬ್ಬ ಬೀಜಿಂಗ್ ಚಳಿಗಾಲದ ಒಲಿಂಪಿಕ್ಸ್‌ನ ಸಾಂಪ್ರದಾಯಿಕ ಜ್ಯೋತಿ ಹಿಡಿದಿರುವುದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.
ಇದನ್ನು ಖಂಡಿಸಿರುವ ಭಾರತದ ರಾಯಭಾರ ಕಚೇರಿಯು, ಕ್ರೀಡೆಯನ್ನು ರಾಜಕೀಯಗೊಳಿಸುತ್ತಿರುವುದು ವಿಷಾದನೀಯ ಎಂದಿದ್ದು, ಚಳಿಗಾಲದ ಒಲಿಂಪಿಕ್ಸ್‌ನ ಉದ್ಘಾಟನಾ ಹಾಗೂ ಸಮಾರೋಪ ಸಮಾರಂಭದಲ್ಲಿ ಭಾಗವಹಿಸದಿರಲು ನಿರ್ಧರಿಸಿದೆ.
'ಈ ವಿಷಯದ ವರದಿಗಳನ್ನು ನಾವು ಗಮನಿಸಿದ್ದೇವೆ. ಒಲಿಂಪಿಕ್ಸ್‌ನಂತಹ ಕ್ರೀಡೆಯನ್ನು ರಾಜಕೀಯಗೊಳಿಸಲು ಚೀನಾ ಯತ್ನಿಸಿರುವುದು ನಿಜಕ್ಕೂ ವಿಷಾದನೀಯ. ಬೀಜಿಂಗ್ ಚಳಿಗಾಲದ ಒಲಿಂಪಿಕ್ಸ್‌ನ ಉದ್ಘಾಟನಾ ಹಾಗೂ ಸಮಾರೋಪ ಸಮಾರಂಭಗಳಲ್ಲಿ ಭಾಗವಹಿಸದಿರಲು ನಿರ್ಧರಿಸಲಾಗಿದೆ' ಎಂದು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.