ನವದೆಹಲಿ: ಭಾರತದ ಯೊಗೇಶ್ ಕಥುನಿಯಾ ಅವರು ಬರ್ಲಿನ್ನಲ್ಲಿ ನಡೆಯುತ್ತಿರುವ ಪ್ಯಾರಾಗ್ರ್ಯಾನ್ ಪ್ರಿ ಅಥ್ಲೆಟಿಕ್ಸ್ನ ಡಿಸ್ಕಸ್ ಥ್ರೋನಲ್ಲಿ ವಿಶ್ವದಾಖಲೆ ನಿರ್ಮಿಸಿದ್ದಾರೆ.
ಸೋಮವಾರ ನಡೆದ ಸ್ಪರ್ಧೆಯಲ್ಲಿ ಯೊಗೇಶ್ ಅವರು 45.18 ಮೀಟರ್ಸ್ ದೂರ ಡಿಸ್ಕಸ್ ಎಸೆದು ಚಿನ್ನದ ಸಾಧನೆ ಮಾಡಿದ್ದಾರೆ. ಇದರೊಂದಿಗೆ ಈ ಹಿಂದೆ 42.96 ಮೀಟರ್ಸ್ ದೂರ ಡಿಸ್ಕಸ್ ಎಸೆದಿದ್ದ ಚೀನಾದ ಕ್ವಿಕಿಂಗ್ ಲೀ ಅವರ ಹೆಸರಲ್ಲಿದ್ದ ವಿಶ್ವದಾಖಲೆಯನ್ನು ಮುರಿದಿದ್ದಾರೆ.
ಯೊಗೇಶ್ ತಮ್ಮ ಮೂರನೇ ಪ್ರಯತ್ನದಲ್ಲಿ ಈ ದಾಖಲೆ ನಿರ್ಮಿಸಿದರು. ಪೋಲೆಂಡ್ನ ಪಾವೆಲ್ ಪಿಯೊಟ್ರೊವಸ್ಕಿ ಹಾಗೂ ಅಲೆಕ್ಸಾಂಡರ್ ಎಲ್ವೌ ಅವರು ಕ್ರಮವಾಗಿ ಬೆಳ್ಳಿ ಹಾಗೂ ಕಂಚಿನ ಪದಕ ಜಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.