ನವದೆಹಲಿ: ಕೊರೊನಾ ವಿರುದ್ಧದ ಹೋರಾಟಕ್ಕೆ ಕೈಜೋಡಿಸಿರುವ ಭಾರತ ಒಲಿಂಪಿಕ್ ಸಂಸ್ಥೆಯು (ಐಒಎ) ₹ 71 ಲಕ್ಷ ದೇಣಿಗೆ ಸಂಗ್ರಹಿಸಿದೆ.
‘ಕೊರೊನಾದಿಂದ ಇಡೀ ದೇಶವೇ ತಲ್ಲಣಿಸಿದೆ. ಇಂತಹ ಸಮಯದಲ್ಲಿ ಕೇಂದ್ರ ಸರ್ಕಾರಕ್ಕೆ ನೆರವಿನ ಹಸ್ತ ಚಾಚುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಈ ಕಾರ್ಯಕ್ಕೆ ಕೈಜೋಡಿಸಿದ ರಾಷ್ಟ್ರೀಯ ಕ್ರೀಡಾ ಫೆಡರೇಷನ್‌ಗಳು (ಎನ್‌ಎಸ್‌ಎಫ್), ಐಒಎ ಮಾನ್ಯತೆ ಹೊಂದಿರುವ ರಾಜ್ಯ ಸಂಸ್ಥೆಗಳು ಹಾಗೂ ಇತರೆ ಫೆಡರೇಷನ್‌ಗಳಿಗೆ ನಾವು ಆಭಾರಿಯಾಗಿದ್ದೇವೆ’ ಎಂದು ಐಒಎ ಮಹಾ ಕಾರ್ಯದರ್ಶಿ ರಾಜೀವ್ ಮೆಹ್ತಾ, ಶುಕ್ರವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
‘ಸಂಗ್ರಹವಾಗಿರುವ ದೇಣಿಗೆಯನ್ನು ಪ್ರಧಾನ ಮಂತ್ರಿಗಳ ‘ಕೇರ್ಸ್’ ನಿಧಿಗೆ ವರ್ಗಾವಣೆ ಮಾಡುವುದಾಗಿಯೂ’ ಪ್ರಕಟಣೆಯಲ್ಲಿ ಹೇಳಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.