ನವದೆಹಲಿ: ಒಲಿಂಪಿಕ್ ಭವನದಲ್ಲಿ ಇದೇ 25ರಂದು ನಿಗದಿಯಾಗಿದ್ದ ಭಾರತ ಒಲಿಂಪಿಕ್ ಸಂಸ್ಥೆಯ ವಿಶೇಷ ಮಹಾಸಭೆ ಯನ್ನು ಬುಧವಾರ ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ.
ಸಂಸ್ಥೆಯ ಅಧ್ಯಕ್ಷೆ ಪಿ.ಟಿ.ಉಷಾ ಅವರ ನಿರ್ದೇಶನದ ಮೇರೆಗೆ ಮುಂದೂಡಲಾಗಿದೆ ಎಂದು ಸಂಸ್ಥೆಯ ಕಾರ್ಯಕಾರಿ ಮಂಡಳಿ ಮತ್ತು ಇತರ ಭಾಗಿದಾರರಿಗೆ ಐಒಎ ನಿರ್ದೇಶಕ ಜಾರ್ಜ್ ಮ್ಯಾಥ್ಯೂ ಅವರು ಇ–ಮೇಲ್ ಮೂಲಕ ತಿಳಿಸಿದ್ದಾರೆ.
ಸಭೆಯ ಹೊಸ ದಿನಾಂಕವನ್ನು ಶೀಘ್ರದಲ್ಲೇ ತಿಳಿಸಲಾಗುವುದು. ಅನಾನುಕೂಲಕ್ಕೆ ಕ್ಷಮೆ ಯಾಚಿಸುತ್ತೇವೆ ಎಂದು ಮೇಲ್‌ನಲ್ಲಿ ತಿಳಿಸಲಾಗಿದೆ. ಉಷಾ ಮತ್ತು ಕಾರ್ಯಕಾರಿ ಸಮಿತಿ ಸದಸ್ಯರ ನಡುವೆ ಸಮರ ನಡೆಯುತ್ತಿದ್ದು, ಇದು ತೀವ್ರಗೊಳ್ಳುತ್ತ ಸಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.