ADVERTISEMENT

ಬೆಂಗಳೂರು | ಕಬಡ್ಡಿ: ಬಿಎಂಎಸ್‌ ಕಾಲೇಜು ಪ್ರಥಮ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2024, 16:22 IST
Last Updated 24 ಸೆಪ್ಟೆಂಬರ್ 2024, 16:22 IST
ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾವಳಿಯ ಬಾಲಕಿಯರ ವಿಭಾಗದಲ್ಲಿ ಬಸವನಗುಡಿಯ ಬಿಎಂಎಸ್ ಮಹಿಳಾ ಪದವಿ ಪೂರ್ವ ಕಾಲೇಜು ಪ್ರಥಮ ಸ್ಥಾನ ಗಳಿಸಿದೆ.
ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾವಳಿಯ ಬಾಲಕಿಯರ ವಿಭಾಗದಲ್ಲಿ ಬಸವನಗುಡಿಯ ಬಿಎಂಎಸ್ ಮಹಿಳಾ ಪದವಿ ಪೂರ್ವ ಕಾಲೇಜು ಪ್ರಥಮ ಸ್ಥಾನ ಗಳಿಸಿದೆ.   

ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಬೆಂಗಳೂರು ಸಹಯೋಗದೊಂದಿಗೆ ಪಿ.ಇ.ಎಸ್. ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾವಳಿ ನಡೆಯಿತು.

ಎರಡು ದಿನಗಳ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದ ಶಾಸಕ ಎಲ್.ಎ.ರವಿಸುಬ್ರಮಣ್ಯ, ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಭಾಗವಹಿಸಬೇಕು. ಬಸವನಗುಡಿ ಕ್ಷೇತ್ರದ ಕ್ರೀಡಾಂಗಣಗಳ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಶಿಕ್ಷಣ ತಜ್ಞ ಎಂ.ಆರ್.ದೊರೆಸ್ವಾಮಿ, ಕಬಡ್ಡಿ ಗ್ರಾಮೀಣ ಕ್ರೀಡೆಯಾಗಿದ್ದು, ದೇಹಕ್ಕೆ ಅತಿ ಹೆಚ್ಚು ವ್ಯಾಯಾಮ ಸಿಗುತ್ತದೆ ಎಂದು ತಿಳಿಸಿದರು.

ADVERTISEMENT

ವಿ.ವಿ ಪುರಂ ಉಪ ವಿಭಾಗದ ಎಸಿಪಿ ಶಮೀದ್ ಬಾಷಾ, ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಒಟ್ಟು 179 ತಂಡಗಳು ಭಾಗವಹಿಸಿದ್ದು ಸಂತೋಷದ ವಿಷಯ ಎಂದರು.

ಸಮಾರೋಪ ಸಮಾರಂಭದಲ್ಲಿ ಪಿಇಎಸ್ ಪಿಯು ಕಾಲೇಜಿನ ಪ್ರಾಂಶುಪಾಲ ಸಿ. ನಾರಾಯಣರೆಡ್ಡಿ ಬಹುಮಾನ ವಿತರಿಸಿದರು.

ಬಾಲಕಿಯರ ವಿಭಾಗದಲ್ಲಿ ಬಸವನಗುಡಿಯ ಬಿಎಂಎಸ್ ಮಹಿಳಾ ಪದವಿ ಪೂರ್ವ ಕಾಲೇಜು ಪ್ರಥಮ, ಪಟ್ಟಣಗೆರೆಯ ಸಂತ ಅಂತೋನಿ ಪದವಿ ಪೂರ್ವ ಕಾಲೇಜು ದ್ವಿತೀಯ ಸ್ಥಾನ ಗಳಿಸಿತು. ಬಾಲಕರ ವಿಭಾಗದಲ್ಲಿ ಕಾಡಗೋಡಿಯ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರಥಮ, ಚನ್ನಸಂದ್ರದ ಆರ್‍ಎನ್‍ಎಸ್ ಪದವಿಪೂರ್ವ ಕಾಲೇಜು ದ್ವಿತೀಯ ಸ್ಥಾನ ಪಡೆದಿದೆ.

ವಿದ್ಯಾಸಂಸ್ಥೆಯ ಎಚ್‌.ಎನ್.ಕ್ಯಾಂಪಸ್‌ ನಿರ್ದೇಶಕ ಎಂ.ವಿ. ಸತ್ಯನಾರಾಯಣ, ಕ್ರೀಡಾ ನಿರ್ದೇಶಕ ಸಿದ್ದರಾಜು, ಕ್ರೀಡಾ ಸಂಚಾಲಕ ಮುನಿರಾಜು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.