ಬೆಂಗಳೂರು: ಟೋಕಿಯೊ ಒಲಿಂಪಿಕ್ಸ್ 2020ರ ಕ್ರೀಡಾಕೂಟದಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ರಾಜ್ಯದ ಕ್ರೀಡಾಪಟುಗಳಿಗೆ ಹಾಗೂ ತರಬೇತುದಾರರಿಗೆ ತಲಾ ₹1 ಲಕ್ಷ ಪ್ರೋತ್ಸಾಹ ಧನವನ್ನು ರಾಜ್ಯಪಾಲ ತವರ್ ಚಂದ್ ಗೆಹ್ಲೋಟ್ ಘೋಷಣೆ ಮಾಡಿದ್ದಾರೆ.
ಗಾಲ್ಫ್ ವಿಭಾಗದಲ್ಲಿ ಸ್ಪರ್ಧಿಸಿದ್ದ ಅದಿತಿ ಅಶೋಕ್, ಕುದುರೆ ಸವಾರಿ ವಿಭಾಗದಲ್ಲಿ ಪಾಲ್ಗೊಂಡಿದ್ದ ಫವಾದ್ ಮಿರ್ಜಾ ಹಾಗೂ ಈಜು ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಶ್ರೀಹರಿ ನಟರಾಜ್ ಅವರಿಗೆ ತಲಾ ₹1 ಲಕ್ಷ ಪ್ರೋತ್ಸಾಹ ಧನ ಸಿಗಲಿದೆ. ಮಹಿಳಾ ಹಾಕಿ ತಂಡದ ತರಬೇತುದಾರರಾಗಿದ್ದ ಅಂಕಿತಾ ಸುರೇಶ್ ಅವರಿಗೆ ₹1 ಲಕ್ಷ ಸಿಗಲಿದೆ.
ರಾಜಭವನದಲ್ಲಿ ಆಯೋಜಿಸುವ ಸಮಾರಂಭದಲ್ಲಿ ರಾಜ್ಯದ ಕ್ರೀಡಾಪಟುಗಳು ಹಾಗೂ ಕ್ರೀಡಾ ತರಬೇತುದಾರರನ್ನು ಸನ್ಮಾನಿಸಲಿದ್ದಾರೆ ಎಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್.ಪ್ರಭು ಶಂಕರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.