ವಿಜಯಪುರ:ಮಂಡ್ಯ ಜಿಲ್ಲಾ ಬಾಲಕಿಯರ ತಂಡ ಮತ್ತು ಮೈಸೂರು ಜಿಲ್ಲಾ ಬಾಲಕರ ತಂಡ, ನಗರದ ಬಿ.ಎಲ್.ಡಿ.ಇ. ಸಂಸ್ಥೆಯ ವೈದ್ಯಕೀಯ ಕಾಲೇಜು ಕ್ರೀಡಾಂಗಣದಲ್ಲಿ ಗುರುವಾರ ನಡೆದ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕೊಕ್ಕೊ ಪಂದ್ಯಾವಳಿಯಲ್ಲಿ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡವು.
ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಬಿ.ಎಲ್.ಡಿ.ಇ ಸಂಸ್ಥೆಯ ಆಶ್ರಯದಲ್ಲಿ ನಡೆದ ಟೂರ್ನಿಯ ಫೈನಲ್ ಪಂದ್ಯದಲ್ಲಿ ಮಂಡ್ಯ ಬಾಲಕಿಯರ ತಂಡವು ಮೈಸೂರು ಬಾಲಕಿಯರ ತಂಡವನ್ನು 11–8 ಅಂಕಗಳಿಂದ ಸೋಲಿಸಿತು.
ಬಾಲಕರ ವಿಭಾಗದ ಪಂದ್ಯದಲ್ಲಿ ಮೈಸೂರು ತಂಡವು ದಾವಣಗೆರೆ ತಂಡವನ್ನು 14 -13 ಅಂಕಗಳಿಂದ ಸೋಲಿಸಿ ಪ್ರಶಸ್ತಿ ಜಯಿಸಿತು.
ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ ಅವರು ವೈಯಕ್ತಿಕವಾಗಿ ಘೋಷಿಸಿದ್ದಂತೆ ಪ್ರಥಮ ಸ್ಥಾನ ಪಡೆದ ತಂಡಗಳಿಗೆ ತಲಾ ₹ 15 ಸಾವಿರ, ದ್ವಿತೀಯ ಸ್ಥಾನ ಪಡೆದ ತಂಡಗಳಿಗೆ ತಲಾ ₹10 ಸಾವಿರ ನಗದು ಬಹುಮಾನ,ಪಾರಿತೋಷಕ ಹಾಗೂ ಪ್ರಶಸ್ತಿಪತ್ರ ನೀಡಲಾಯಿತು.
ಕಾಂಗ್ರೆಸ್ ಮುಖಂಡ ಸಂಗಮೇಶ ಬಬಲೇಶ್ವರಬಹುಮಾನ ವಿತರಿಸಿದರು. ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್.ಎನ್.ಬಗಲಿ, ಶಾಖಾಧಿಕಾರಿ ಬಿ.ಟಿ.ಗೊಂಗಡಿ, ಬಿ.ಎಲ್.ಡಿ.ಇ ಸಂಸ್ಥೆಯ ಮುಖ್ಯ ಆಡ ಳಿತಾಧಿಕಾರಿ ಆರ್.ಬಿ.ಕೊಟ್ನಾಳ, ಆಡಳಿ ತಾಧಿಕಾರಿ ಬಿ.ಆರ್.ಪಾಟೀಲ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.