ADVERTISEMENT

ಹುಬ್ಬಳ್ಳಿಯ ಕೆಎಸ್‌ಎಲ್‌ಯು ತಂಡಕ್ಕೆ ಪ್ರಶಸ್ತಿ

ಅಂತರ ಕಾನೂನು ಕಾಲೇಜು ಟಿಟಿ ಟೂರ್ನಿ

​ಪ್ರಜಾವಾಣಿ ವಾರ್ತೆ
Published 16 ಜೂನ್ 2024, 5:02 IST
Last Updated 16 ಜೂನ್ 2024, 5:02 IST
ಬೆಂಗಳೂರಿನಲ್ಲಿ ಗುರುವಾರ ನಡೆದ ಅಂತರ ಕಾನೂನು ಕಾಲೇಜು ಟೇಬಲ್ ಟೆನಿಸ್ ಟೂರ್ನಿಯ ಪುರುಷರ ವಿಭಾಗದಲ್ಲಿ ಪ್ರಶಸ್ತಿ ಗೆದ್ದುಕೊಂಡ ಹುಬ್ಬಳ್ಳಿಯ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ತಂಡ.
ಬೆಂಗಳೂರಿನಲ್ಲಿ ಗುರುವಾರ ನಡೆದ ಅಂತರ ಕಾನೂನು ಕಾಲೇಜು ಟೇಬಲ್ ಟೆನಿಸ್ ಟೂರ್ನಿಯ ಪುರುಷರ ವಿಭಾಗದಲ್ಲಿ ಪ್ರಶಸ್ತಿ ಗೆದ್ದುಕೊಂಡ ಹುಬ್ಬಳ್ಳಿಯ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ತಂಡ.   

ಬೆಂಗಳೂರು: ಹುಬ್ಬಳ್ಳಿಯ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯವು, ಗುರುವಾರ ಶ್ರೀಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಅಂತರ ಕಾನೂನು ಕಾಲೇಜು ಟೇಬಲ್ ಟೆನಿಸ್‌ ಟೂರ್ನಿಯ ಪುರುಷರ ವಿಭಾಗದ ಪ್ರಶಸ್ತಿ ಗೆದ್ದುಕೊಂಡಿತು.

ಶೇಷಾದ್ರಿಪುರಂ ಕಾನೂನು ಕಾಲೇಜು ಮತ್ತು ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಜಂಟಿ ಆಶ್ರಯದಲ್ಲಿ ನಡೆದ ಈ ಟೂರ್ನಿಯ ಪುರುಷರ ವಿಭಾದಲ್ಲಿ 15 ತಂಡಗಳು ಮತ್ತು ಮಹಿಳಾ ವಿಭಾಗದಲ್ಲಿ 14 ತಂಡಗಳು ಭಾಗವಹಿಸಿದ್ದವು.

ಬೆಂಗಳೂರಿನ ಕೆಎಲ್‌ಇ ಕಾನೂನು ಕಾಲೇಜು ಎರಡನೇ, ಆತಿಥೇಯ ಶೇಷಾದ್ರಿಪುರಂ ಕಾನೂನು ಕಾಲೇಜು ಮೂರನೇ ಸ್ಥಾನ ಪಡೆದವು. ಬೆಂಗಳೂರಿನ ವಿವೇಕಾನಂದ ಕಾನೂನು ಕಾಲೇಜು ನಾಲ್ಕನೇ ಸ್ಥಾನ ಗಳಿಸಿತು.

ADVERTISEMENT

ಮಂಗಳೂರಿನ ಎಸ್‌ಡಿಎಂ ಕಾನೂನು ಕಾಲೇಜು ಮಹಿಳೆಯರ ವಿಭಾಗದಲ್ಲಿ ಚಾಂಪಿಯನ್ ಆಯಿತು. ಬೆಳಗಾವಿಯ ಆರ್‌.ಎಲ್‌. ಕಾನೂನು  ಕಾಲೇಜು ಎರಡನೇ ಸ್ಥಾನ ಪಡೆಯಿತು. ಬೆಂಗಳೂರಿನ ಕ್ರೈಸ್ಟ್ರ್ ಕಾನೂನು ಕಾಲೇಜು ಮೂರನೇ ಮತ್ತು ಬೆಂಗಳೂರಿನ ಕೆಎಲ್‌ಇ ಕಾನೂನು ಕಾಲೇಜು ನಾಲ್ಕನೇ ಸ್ಥಾನ ಪಡೆದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.