ADVERTISEMENT

ಹಾಕಿ ಇಂಡಿಯಾದ ಸಿಇಒ ಎಲೆನಾ ರಾಜೀನಾಮೆ

​ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2024, 16:16 IST
Last Updated 27 ಫೆಬ್ರುವರಿ 2024, 16:16 IST
<div class="paragraphs"><p>ಎಲೆನಾ </p></div>

ಎಲೆನಾ

   

ನವದೆಹಲಿ (ಪಿಟಿಐ): ‘ತನ್ನ ಸಂಭಾವನೆಯನ್ನು ತಡೆಹಿಡಿಯಲಾಗಿದೆ ಮತ್ತು ಗುಂಪುಗಾರಿಕೆಯಿಂದಾಗಿ ಕರ್ತವ್ಯ ನಿರ್ವಹಿಸುವುದು ಕಷ್ಟವಾಗಿದೆ’ ಎಂದು ಆರೋಪಿಸಿ ಹಾಕಿ ಇಂಡಿಯಾದ ಸಿಇಒ ಎಲೆನಾ ನಾರ್ಮನ್‌ ಮಂಗಳವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಆಸ್ಟ್ರೇಲಿಯಾದ ಎಲೆನಾ 13 ವರ್ಷಗಳ ಕಾಲ ಸಿಇಒ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ಅವರಿಗೆ ಮೂರು ತಿಂಗಳ ಸಂಭಾವನೆ ಪಾವತಿ ಮಾಡಿಲ್ಲ ಎಂದು ಹಾಕಿ ಇಂಡಿಯಾದ ಮೂಲಗಳು ತಿಳಿಸಿವೆ.

ADVERTISEMENT

‘ತಮಗೆ ಗೌರವ ಸಿಗುತ್ತಿಲ್ಲ’ ಎಂದು ಆರೋಪಿಸಿ ಭಾರತ ಮಹಿಳಾ ಹಾಕಿ ತಂಡದ ಮುಖ್ಯ ಕೋಚ್‌ ಯಾನೆಕ್ ಶೋಪ್‌ಮನ್ ಶುಕ್ರವಾರ ರಾಜೀನಾಮೆ ನೀಡಿದ್ದರು. ಅದರ ಬೆನ್ನಲ್ಲೇ ಎಲೆನ್‌ ಕೂಡ ರಾಜೀನಾಮೆ ಸಲ್ಲಿಸಿದ್ದು, ಅಧ್ಯಕ್ಷ ದಿಲೀಪ್‌ ಟಿರ್ಕೆ ಅಂಗೀಕರಿಸಿದ್ದಾರೆ.

‘ಹಾಕಿ ಇಂಡಿಯಾದಲ್ಲಿ ಎರಡು ಬಣಗಳಿವೆ. ಈ ಬಣಗಳ ನಡುವೆ ಕೆಲಸ ಮಾಡುವುದು ಕಷ್ಟವಾಗುತ್ತದೆ’ ಎಂದು ಅವರು ದೂರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.