ADVERTISEMENT

ಡೈಮಂಡ್‌ ಲೀಗ್: ನೀರಜ್‌ಗೆ ಅಗ್ರಸ್ಥಾನ

ಪಿಟಿಐ
Published 26 ಆಗಸ್ಟ್ 2022, 19:51 IST
Last Updated 26 ಆಗಸ್ಟ್ 2022, 19:51 IST
ನೀರಜ್‌ ಚೋಪ್ರಾ
ನೀರಜ್‌ ಚೋಪ್ರಾ   

ಲಾಸನ್‌: ಭಾರತದ ಜಾವೆಲಿನ್‌ ಥ್ರೋ ಸ್ಪರ್ಧಿ ನೀರಜ್‌ ಚೋಪ್ರಾ ಅವರು ಲಾಸನ್‌ನಲ್ಲಿ ನಡೆದ ಡೈಮಂಡ್‌ ಲೀಗ್‌ನಲ್ಲಿ ಅಗ್ರಸ್ಥಾನ ಪಡೆದರು. ಈ ಸಾಧನೆ ಮಾಡಿದ ಭಾರತದ ಮೊದಲ ಅಥ್ಲೀಟ್‌ ಎಂಬ ಗೌರವ ತಮ್ಮದಾಗಿಸಿಕೊಂಡರು.

ಶುಕ್ರವಾರ ನಡೆದ ಸ್ಪರ್ಧೆಯಲ್ಲಿ ನೀರಜ್‌ 89.04 ಮೀ. ಸಾಧನೆಯೊಂದಿಗೆ ಮೊದಲ ಸ್ಥಾನ ಗಿಟ್ಟಿಸಿಕೊಂಡರು. ಅವರ ಮೊದಲ ಪ್ರಯತ್ನದಲ್ಲೇ ಈ ಸಾಧನೆ ಮೂಡಿಬಂತು. ಜೇಕಬ್‌ ವಾಡ್ಲೆಚ್‌ (85.88 ಮೀ.) ಎರಡನೇ ಸ್ಥಾನ ಪಡೆದರೆ, ಅಮೆರಿಕದ ಕರ್ಟಿಸ್‌ ಥಾಂಪ್ಸನ್‌ (83.72 ಮೀ.) ಮೂರನೇ ಸ್ಥಾನ ಗಳಿಸಿದರು.

ಡಿಸ್ಕಸ್‌ ಥ್ರೋ ಸ್ಪರ್ಧಿ ವಿಕಾಸ್‌ ಗೌಡ ಅವರು ಎರಡನೇ ಸ್ಥಾನ ಪಡೆದದ್ದು, ಡೈಮಂಡ್‌ ಲೀಗ್‌ನಲ್ಲಿ ಭಾರತದ ಅಥ್ಲೀಟ್‌ವೊಬ್ಬರ ಇದುವರೆಗಿನ ಉತ್ತಮ ಸಾಧನೆ ಎನಿಸಿತ್ತು. ವಿಕಾಸ್‌ ಅವರು 2012 ರ ನ್ಯೂಯಾರ್ಕ್‌ ಮತ್ತು 2014ರ ದೋಹಾ ಕೂಟದಲ್ಲಿ ಎರಡನೇ ಸ್ಥಾನ ಪಡೆದುಕೊಂಡಿದ್ದರು. 2015 ರಲ್ಲಿ ಶಾಂಘೈ ಮತ್ತು ಯೂಜಿನ್‌ ಕೂಟಗಳಲ್ಲಿ ಮೂರನೇ ಸ್ಥಾನ ಗಳಿಸಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.