ನವದೆಹಲಿ: ಕಳೆದ ವರ್ಷ ಜಪಾನ್‌ನಲ್ಲಿ ನಡೆದ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದಿರುವ ಭಾರತದ ಹೆಮ್ಮೆಯ ಬಾಕ್ಸರ್ ಲವ್ಲಿನಾ ಬೋರ್ಗೊಹೈನ್ ಅವರನ್ನು ಅಸ್ಸಾಂ ಪೊಲೀಸ್ ಇಲಾಖೆಯಲ್ಲಿ ಡೆಪ್ಯೂಟಿ ಸೂಪರಿಟೆಂಡೆಂಟ್ ಆಫ್ ಪೊಲೀಸ್ (ಡಿಎಸ್‌ಪಿ) ಆಗಿ ನೇಮಕ ಮಾಡಲಾಗಿದೆ.
ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ನೇಮಕ ಪತ್ರವನ್ನು ಹಸ್ತಾಂತರಿಸಿದರು.
ಬಾಕ್ಸಿಂಗ್‌ನಲ್ಲಿ ಭಾರತದ ಕೀರ್ತಿ ಪತಾಕೆ ಹಾರಿಸಿರುವ ಲವ್ಲಿನಾ ಸಾಧನೆಯನ್ನು ಗುರುತಿಸಿ ಡಿಎಸ್‌ಪಿ ಹುದ್ದೆ ನೀಡಿ ಗೌರವಿಸಲಾಗಿದೆ.
ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಮಹಿಳೆಯರ 69 ಕೆ.ಜಿ. ವಿಭಾಗದಲ್ಲಿ 24 ವರ್ಷದ ಲವ್ಲಿನಾ ಕಂಚಿನ ಪದಕ ಗೆದ್ದಿದ್ದರು. ಈ ಮೂಲಕ ಒಲಿಂಪಿಕ್ಸ್‌ನಲ್ಲಿ ಪದಕ ಜಯಿಸಿದ ಭಾರತದ ಮೂರನೇ ಬಾಕ್ಸರ್ ಎನಿಸಿದ್ದರು.
ಈ ಹಿಂದೆ ಅಂತರರಾಷ್ಟ್ರೀಯ ಅಥ್ಲೀಟ್ ಹಿಮಾ ದಾಸ್ ಅವರಿಗೂ ಅಸ್ಸಾಂ ಸರ್ಕಾರ ಡಿಎಸ್‌ಪಿ ಹುದ್ದೆ ನೀಡಿ ಗೌರವಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.