ADVERTISEMENT

Paris Olympics: ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಈಜಿಪ್ಟ್‌ ಕುಸ್ತಿಪಟು ಬಂಧನ

ಏಜೆನ್ಸೀಸ್
Published 9 ಆಗಸ್ಟ್ 2024, 11:46 IST
Last Updated 9 ಆಗಸ್ಟ್ 2024, 11:46 IST
<div class="paragraphs"><p>ಪ್ಯಾರಿಸ್‌ನಲ್ಲಿ ಭದ್ರತೆಗೆ ನಿಯೋಜನೆಗೊಂಡಿರುವ ಪೊಲೀಸರು</p></div>

ಪ್ಯಾರಿಸ್‌ನಲ್ಲಿ ಭದ್ರತೆಗೆ ನಿಯೋಜನೆಗೊಂಡಿರುವ ಪೊಲೀಸರು

   

ರಾಯಿಟರ್ಸ್‌ ಚಿತ್ರ

ಪ್ಯಾರಿಸ್‌: ಒಲಿಂಪಿಕ್ಸ್‌ನಲ್ಲಿ ಪಾಲ್ಗೊಂಡಿದ್ದ ಈಜಿಪ್ಟ್‌ ಕುಸ್ತಿಪಟುವನ್ನು ಲೈಂಗಿಕ ದೌರ್ಜನ್ಯವೆಸಗಿದ ಆರೋಪದಲ್ಲಿ ಬಂಧಿಸಲಾಗಿದೆ ಎಂದು ಫ್ರೆಂಚ್‌ ಪ್ರಾಸಿಕ್ಯೂಟರ್‌ ಕಚೇರಿ ಶುಕ್ರವಾರ ತಿಳಿಸಿದೆ.

ADVERTISEMENT

ರಾಜಧಾನಿ ಪ್ಯಾರಿಸ್‌ನಲ್ಲಿ ಕೆಫೆಯೊಂದರ ಹೊರಗೆ ಮಹಿಳೆಯೊಬ್ಬರಿಗೆ ಶುಕ್ರವಾರ ಬೆಳಿಗ್ಗೆ ಕಿರುಕುಳ ನೀಡಿದ ಆರೋಪದಲ್ಲಿ 24 ವರ್ಷದ ಕ್ರೀಡಾಳುವನ್ನು ಬಂಧಿಸಲಾಗಿದೆ ಎಂದು ಹೇಳಿಕೆ ಬಿಡುಗಡೆ ಮಾಡಿದೆ.

ಬಂಧಿತ ಅಥ್ಲೀಟ್ ಹೆಸರೇನು ಎಂಬುದನ್ನು ಬಹಿರಂಗಪಡಿಸಿಲ್ಲ. ಆದರೆ, ಅವರು ಈಜಿಪ್ಟ್‌ನವರು. ಒಲಿಂಪಿಕ್ಸ್‌ನಲ್ಲಿ ಸ್ಪರ್ಧಿಸಿದ್ದರು ಎಂದು ತಿಳಿಸಲಾಗಿದೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಈಜಿಪ್ಟ್‌ ಕುಸ್ತಿ ಫೆಡರೇಷನ್‌ ಸದ್ಯಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.