ಪ್ಯಾರಿಸ್: ಫ್ರಾನ್ಸ್‌ನಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಮಹಿಳೆಯರ 50 ಕೆ.ಜಿ ವಿಭಾಗದಲ್ಲಿ ಭಾರತದ ಕುಸ್ತಿಪಟು ವಿನೇಶಾ ಫೋಗಾಟ್ ಫೈನಲ್‌ಗೆ ಪ್ರವೇಶಿಸಿದ್ದಾರೆ.
ಇಂದು ನಡೆದ ಸೆಮಿಫೈನಲ್ ಪಂದ್ಯದಲ್ಲಿ ಕ್ಯೂಬಾದ ಯುಸ್ನೆಲಿಸ್ ಗುಜ್ಮನ್ ಗೊಮೆಜ್ ಅವರನ್ನು 5-0 ಅಂತರದಿಂದ ಮಣಿಸಿ ಗೆಲುವಿನ ನಗೆ ಬೀರಿದರು.
ಒಲಿಂಪಿಕ್ಸ್ ಫೈನಲ್ ಪ್ರವೇಶಿಸಿದ ಭಾರತದ ಮೊದಲ ಮಹಿಳಾ ಕುಸ್ತಿಪಟುವೆಂಬ ಹೆಗ್ಗಳಿಕೆ ಅವರದ್ದಾಗಿದೆ. ಇದರೊಂದಿಗೆ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾರತಕ್ಕೆ ನಾಲ್ಕನೇ ಪದಕ ಲಭಿಸುವುದು ನಿಚ್ಚಳವಾಗಿದೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.