ಚೆನ್ನೈ: ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತದ ಪುರುಷ ಹಾಕಿ ತಂಡಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿ ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಮೋದಿ, ಈ ಗೆಲುವು ನಮ್ಮ ಆಟಗಾರರ ಅವಿರತ ಪರಿಶ್ರಮ, ಕಠಿಣ ತರಬೇತಿ, ಮತ್ತು ಅರ್ಪಣಾ ಮನೋಭಾವವನ್ನು ತೋರಿಸುತ್ತದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಏಷ್ಯನ್ ಚಾಂಪಿಯನ್ಸ್ ಟ್ರೋಫಿ; ಭಾರತದ ಮುಡಿಗೆ ಕಿರೀಟ
ಹಾಕಿ ತಂಡದ ಅದ್ಭುತ ಪ್ರದರ್ಶನವು ದೇಶದ ಜನತೆಯ ಹೆಮ್ಮೆಗೆ ಕಾರಣವಾಗಿದೆ ಎಂದು ಹೇಳಿದ್ದಾರೆ.
ಚೆನ್ನೈನಲ್ಲಿ ಶನಿವಾರ ನಡೆದ ಫೈನಲ್‌ನಲ್ಲಿ ಭಾರತ ತಂಡವು 4–3ರಿಂದ ಮಲೇಷ್ಯಾ ಎದುರು ಜಯಗಳಿಸಿತು. ಒಂದು ಹಂತದಲ್ಲಿ ಭಾರತ 1-3 ಗೋಲುಗಳ ಹಿನ್ನಡೆ ಅನುಭವಿಸಿತ್ತು. ಆದರೆ ಕೊನೆಯ ಕ್ವಾರ್ಟರ್‌ನಲ್ಲಿ ಪುಟಿದೇಳುವ ಮೂಲಕ ನಾಲ್ಕನೇ ಬಾರಿಗೆ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಕಿರೀಟ ಎತ್ತಿ ಹಿಡಿದಿದೆ.
ಇದನ್ನೇ ಉಲ್ಲೇಖ ಮಾಡಿರುವ ಕೇಂದ್ರ ಸಚಿವ ಅನುರಾಗ್ ಠಾಕೂರ್, ಫೈನಲ್ ಪಂದ್ಯವನ್ನು ಕಣ್ಣಾರೆ ನೋಡಿದೆ. ಈ ಪಂದ್ಯವು ಕೊನೆಯ ಕ್ಷಣದವರೆಗೂ ತುದಿಗಾಲಲ್ಲಿ ನಿಲ್ಲುವಂತೆ ಮಾಡಿತ್ತು ಎಂದು ಹೇಳಿದ್ದಾರೆ. ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತ ತಂಡಕ್ಕೆ ಅಭಿನಂದನೆಗಳು ಎಂದು ಹೇಳಿದ್ದಾರೆ.
ಭಾರತ ಹಾಕಿ ತಂಡಕ್ಕೆ ಶುಭಾಶಯಗಳ ಮಹಾಪೂರ:
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.