ADVERTISEMENT

ಕಾಮನ್‌ವೆಲ್ತ್‌ ಕ್ರೀಡಾಕೂಟ: ಭಾರತೀಯ ಅಥ್ಲೀಟ್‌ಗಳ ಜತೆ ಪ್ರಧಾನಿ ಮೋದಿ ಇಂದು ಸಂವಾದ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 20 ಜುಲೈ 2022, 5:22 IST
Last Updated 20 ಜುಲೈ 2022, 5:22 IST
ನರೇಂದ್ರ ಮೋದಿ
ನರೇಂದ್ರ ಮೋದಿ   

ನವದೆಹಲಿ: ಕಾಮನ್‌ವೆಲ್ತ್‌ ಕ್ರೀಡಾಕೂಟದಲ್ಲಿ ಭಾಗವಹಿಸಲಿರುವ ಭಾರತೀಯ ಅಥ್ಲೀಟ್‌ಗಳ ಜತೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ವಿಡಿಯೊ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಲಿದ್ದಾರೆ.

ಇಂಗ್ಲೆಂಡ್‌ನ ಬರ್ಮಿಂಗ್‌ಹ್ಯಾಂನಲ್ಲಿ ಜುಲೈ 28ರಂದು ಕಾಮನ್‌ವೆಲ್ತ್‌ ಕ್ರೀಡಾಕೂಟದ ಆರಂಭವಾಗಲಿದೆ. ಆಗಸ್ಟ್‌ 8ರವರಗೆ ಕ್ರೀಡಾಕೂಟ ನಡೆಯಲಿದೆ.

19 ಕ್ರೀಡಾ ವಿಭಾಗಗಳಲ್ಲಿ ನಡೆಯುವ 141 ಸ್ಪರ್ಧೆಗಳಲ್ಲಿ ಭಾಗವಹಿಸುವ ಒಟ್ಟು 215 ಅಥ್ಲೀಟ್‌ಗಳು ಕಾಮನ್‌ವೆಲ್ತ್‌ ಕ್ರೀಡಾಕೂಟದಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ.

ADVERTISEMENT

ಕಾಮನ್‌ವೆಲ್ತ್‌ ಕೂಟದಲ್ಲಿ 72 ದೇಶಗಳ ಐದು ಸಾವಿರಕ್ಕೂ ಅಧಿಕ ಅಥ್ಲೀಟ್‌ಗಳು ಪಾಲ್ಗೊಳ್ಳಲಿದ್ದಾರೆ.

2020ರ ಟೋಕಿಯೊ ಒಲಿಂಪಿಕ್ಸ್‌ ಹಾಗೂ ಪ್ಯಾರಾಲಿಂಪಿಕ್ಸ್‌‌ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಭಾರತೀಯ ಅಥ್ಲೀಟ್‌ಗಳ ಜತೆ ಮೋದಿ ಸಂವಾದ ನಡೆಸಿದ್ದರು.

ಕಾಮನ್‌ವೆಲ್ತ್‌ ಕೂಟ: 12 ಲಕ್ಷ ಟಿಕೆಟ್ ಮಾರಾಟ
ಬರ್ಮಿಂಗ್‌ಹ್ಯಾಂನಲ್ಲಿ ಜುಲೈ 28 ರಂದು ಆರಂಭವಾಗುವ ಕಾಮನ್‌ವೆಲ್ತ್‌ ಕ್ರೀಡಾಕೂಟದ 12 ಲಕ್ಷ ಟಿಕೆಟ್‌ಗಳು ಮಾರಾಟವಾಗಿವೆ.

ಎಜ್‌ಬಾಸ್ಟನ್‌ನಲ್ಲಿ ಜುಲೈ 31 ರಂದು ನಡೆಯಲಿರುವ ಭಾರತ–ಪಾಕಿಸ್ತಾನ ಮಹಿಳಾ ಕ್ರಿಕೆಟ್‌ ಪಂದ್ಯದ ಟಿಕೆಟ್‌ಗೆ ಹೆಚ್ಚಿನ ಬೇಡಿಕೆ ಬಂದಿದೆ. ಕಾಮನ್‌ವೆಲ್ತ್‌ ಕೂಟದಲ್ಲಿ ಇದೇ ಮೊದಲ ಬಾರಿ ಮಹಿಳಾ ಕ್ರಿಕೆಟ್‌ ಸೇರಿಸಲಾಗಿದೆ.

‘ಕಾಮನ್‌ವೆಲ್ತ್‌ ಕೂಟದ ವಿವಿಧ ಸ್ಪರ್ಧೆಗಳ 12 ಲಕ್ಷ ಟಿಕೆಟ್‌ಗಳನ್ನು ಈಗಾಗಲೇ ಮಾರಾಟ ಮಾಡಲಾಗಿದೆ. ಕೂಟ ಸಮೀಪಿಸುತ್ತಿರುವಂತೆಯೇ ಇನ್ನಷ್ಟು ಟಿಕೆಟ್‌ಗಳು ಮಾರಾಟವಾಗುವ ನಿರೀಕ್ಷೆ ಇದೆ. 2012ರ ಲಂಡನ್‌ ಒಲಿಂಪಿಕ್ಸ್ ಬಳಿಕ ಬ್ರಿಟನ್‌ನಲ್ಲಿ ನಡೆಯುತ್ತಿರುವ ಅತಿದೊಡ್ಡ ಕ್ರೀಡಾಕೂಟ ಇದಾಗಲಿದೆ’ ಎಂದು ಕ್ರೀಡಾಕೂಟದ ಸಿಇಒ ಇಯಾನ್‌ ರೀಡ್ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.