ನವದೆಹಲಿ: ಛತ್ರಸಲ್ ಕ್ರೀಡಾಂಗಣದಲ್ಲಿ ರಾಷ್ಟ್ರೀಯ ಜೂನಿಯರ್ ಕುಸ್ತಿ ಮಾಜಿ ಚಾಂಪಿಯನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಸೋಮವಾರ ಒಲಿಂಪಿಕ್ಸ್ ಪದಕ ವಿಜೇತ ಕುಸ್ತಿ ಪಟು ಸುಶೀಲ್ ಕುಮಾರ್ ಮತ್ತು 19 ಇತರ ಮಂದಿ ವಿರುದ್ಧ ಪೊಲೀಸರುದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.
ಸುಶೀಲ್ ಕುಮಾರ್ ಅವರನ್ನು ಮುಖ್ಯ ಆರೋಪಿಯನ್ನಾಗಿ ಹೆಸರಿಸಿದ ಅಂತಿಮ ವರದಿಯನ್ನು ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ (ಸಿಎಂಎಂ) ಸತ್ವೀರ್ ಸಿಂಗ್ ಲಂಬಾ ಅವರಿಗೆ ಸಲ್ಲಿಸಲಾಗಿದೆ.
ಪ್ರಕರಣದಲ್ಲಿ ಹದಿನೈದು ಆರೋಪಿಗಳನ್ನು ಬಂಧಿಸಲಾಗಿದ್ದು, ಐವರು ತಲೆಮರೆಸಿಕೊಂಡಿದ್ದಾರೆ.
ಮೇ 4ರ ಮಧ್ಯರಾತ್ರಿ ಸುಶೀಲ್ ಕುಮಾರ್ ಮತ್ತು ಆತನ ಸಹಚರರು, 23 ವರ್ಷದ ಕುಸ್ತಿಪಟು ಸಾಗರ್ ಧನ್‌ಕರ್ ಹಾಗೂ ಅವನ ಇಬ್ಬರು ಸ್ನೇಹಿತರಾದ ಸೋನು ಮತ್ತು ಅಮಿತ್ ಕುಮಾರ್ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಧನ್‌ಕರ್ ಮೃತಪಟ್ಟಿದ್ದರು.
ಸುಶೀಲ್ ಕುಮಾರ್ ಅವರೇ ಪ್ರಕರಣದ ‘ಪ್ರಮುಖ ಆರೋಪಿ ಮತ್ತು ಕೊಲೆಯ ಮಾಸ್ಟರ್ ಮೈಂಡ್’ಎಂದು ಪೊಲೀಸರು ಆರೋಪಿಸಿದ್ದರು. ಈ ಆರೋಪಕ್ಕೆ ಸಂಬಂಧಿಸಿದಂತೆ ನಮ್ಮ ಬಳಿ ಎಲೆಕ್ಟ್ರಾನಿಕ್ ಪುರಾವೆಗಳಿವೆ. ಅದರಲ್ಲಿ ಸುಶೀಲ್ ಮತ್ತು ಆತನ ಸಹಚರರು ಧನ್‌ಕರ್ ಅವರನ್ನು ಲಾಠಿಗಳಿಂದ ಹೊಡೆಯುವುದನ್ನು ಕಾಣಬಹುದು ಎಂದಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.