ADVERTISEMENT

ಯೂತ್‌ ಒಲಿಂಪಿಕ್ಸ್‌ ವಿಜೇತರನ್ನು ಭೇಟಿ ಮಾಡಿದ ಮೋದಿ

ಪಿಟಿಐ
Published 21 ಅಕ್ಟೋಬರ್ 2018, 15:54 IST
Last Updated 21 ಅಕ್ಟೋಬರ್ 2018, 15:54 IST
ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಯೂತ್‌ ಒಲಿಂಪಿಕ್ಸ್‌ ಪದಕ ವಿಜೇತರೊಂದಿಗೆ ಸಂವಾದ ನಡೆಸಿದರು  –ಪಿಟಿಐ ಚಿತ್ರ
ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಯೂತ್‌ ಒಲಿಂಪಿಕ್ಸ್‌ ಪದಕ ವಿಜೇತರೊಂದಿಗೆ ಸಂವಾದ ನಡೆಸಿದರು  –ಪಿಟಿಐ ಚಿತ್ರ   

ನವದೆಹಲಿ: ಅರ್ಜೆಂಟೀನಾದಲ್ಲಿ ನಡೆದ ಯೂತ್‌ ಒಲಿಂಪಿಕ್ಸ್‌ನಲ್ಲಿ ಪದಕ ಜಯಿಸಿದ ಭಾರತದ ಕ್ರೀಡಾಪಟುಗಳನ್ನು ಭಾನುವಾರ ಭೆಟಿ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದಿಸಿದರು.

ಈ ಸಂದರ್ಭದಲ್ಲಿ ಅವರು ಕ್ರೀಡಾಪಟುಗಳೊಂದಿಗೆ ಸಂವಾದ ನಡೆಸಿದರು. ಕಾರ್ಯಕ್ರಮದ ನಂತರ ಟ್ವೀಟ್ ಮಾಡಿರುವ ಅವರು, ‘ನಮ್ಮ ಯುವಶಕ್ತಿ ಬಗ್ಗೆ ಹೆಮ್ಮೆ ಇದೆ। ಯೂತ್‌ ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಪದಕ ಗೆದ್ದಿರುವ ಯುವ ಅಥ್ಲೀಟ್‌ಗಳೊಂದಿಗೆ ಮಾತುಕತೆ ನಡೆಸಿದೆ. ಅವರಿಗೆ ಅಭಿನಂದನೆಗಳು’ ಎಂದಿದ್ದಾರೆ.

ಕೂಟದ ಶೂಟಿಂಗ್‌ನಲ್ಲಿ ಚಿನ್ನದ ಪದಕ ಗೆದ್ದಿದ್ದ ಶೂಟಿಂಗ್ ಪಟು ಮನು ಭಾಕರ್ ಮತ್ತು ಹಾಕಿಯಲ್ಲಿ ಬೆಳ್ಳಿ ಪದಕಗಳನ್ನು ಗೆದ್ದಿರುವ ಪುರುಷ ಮತ್ತು ಮಹಿಳಾ ತಂಡಗಳ ಚಿತ್ರಗಳನ್ನು ಅವರು ತಮ್ಮ ಸಂದೇಶದೊಂದಿಗೆ ಪೋಸ್ಟ್‌ ಮಾಡಿದ್ದಾರೆ.

ADVERTISEMENT

ಈ ಬಾರಿ ಭಾರತವು ಯೂತ್‌ ಒಲಿಂಪಿಕ್ಸ್‌ನಲ್ಲಿ 13 ಪದಕಗಳನ್ನು ಜಯಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.