ADVERTISEMENT

Wrestlers Protest | ಕ್ರೀಡಾಪಟುಗಳು ದೇಶದ ಹೆಮ್ಮೆ: ತನಿಖೆಗೆ ಪ್ರಿಯಾಂಕಾ ಆಗ್ರಹ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 19 ಜನವರಿ 2023, 10:31 IST
Last Updated 19 ಜನವರಿ 2023, 10:31 IST
ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಿಯಾಂಕಾ ಗಾಂಧಿ ವಾದ್ರಾ   

ನವದೆಹಲಿ: ಭಾರತ ಕುಸ್ತಿ ಫೆಡರೇಷನ್ (ಡಬ್ಲ್ಯುಎಫ್‌ಐ) ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕುಸ್ತಿಪಟುಗಳು ಮಾಡಿರುವ ಆರೋಪದ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಒತ್ತಾಯಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಿಯಾಂಕಾ, ನಮ್ಮ ಕ್ರೀಡಾಪಟುಗಳು ದೇಶದ ಹೆಮ್ಮೆ. ಜಾಗತಿಕ ಮಟ್ಟದಲ್ಲಿ ತಮ್ಮ ಸಾಧನೆಯಿಂದ ದೇಶಕ್ಕೆ ಕೀರ್ತಿ ತಂದಿದ್ದಾರೆ ಎಂದು ಉಲ್ಲೇಖ ಮಾಡಿದರು.

ಭಾರತ ಕುಸ್ತಿ ಫೆಡರೇಷನ್ ಮತ್ತು ಅದರ ಅಧ್ಯಕ್ಷರ ವಿರುದ್ಧ ಲೈಂಗಿಕ ದೌರ್ಜನ್ಯ ಸೇರಿದಂತೆ ಕುಸ್ತಿಪಟುಗಳು ಗಂಭೀರ ಆರೋಪ ಮಾಡಿದ್ದಾರೆ. ಆಟಗಾರರ ಧ್ವನಿಯನ್ನು ಆಲಿಸಬೇಕು ಎಂದು ಹೇಳಿದರು.

ಮತ್ತೊಂದೆಡೆ ದೆಹಲಿಯ ಜಂತರ್ ಮಂತರ್‌ನಲ್ಲಿ ಕುಸ್ತಿಪಟುಗಳು ನಡೆಸುತ್ತಿರುವ ಪ್ರತಿಭಟನೆ ಎರಡನೇ ದಿನವೂ ಮುಂದುವರಿದಿದೆ.

ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಮತ್ತು ತರಬೇತುದಾರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.