ನವದೆಹಲಿ: ಎರಡು ಬಾರಿ ಒಲಿಂಪಿಕ್ ಪದಕ ವಿಜೇತೆ ಪಿ.ವಿ. ಸಿಂಧು ಅವರು 2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್ನಲ್ಲಿ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ.
ಮುಂದಿನ ಒಲಿಂಪಿಕ್ಸ್ ವೇಳೆಗೆ ಅವರಿಗೆ 33 ವರ್ಷ ಆಗಲಿದೆ. ಆ ವೇಳೆಗೆ ಗಾಯದ ಸಮಸ್ಯೆ ಇಲ್ಲದಿದ್ದರೆ ಮೂರನೇ ಪದಕ ಗೆಲ್ಲಲು ಕಣಕ್ಕಿಳಿಯುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಪದಕದ ನಿರೀಕ್ಷೆಯೊಂದಿಗೆ ಸಿಂಧು ಕಣಕ್ಕಿಳಿದಿದ್ದರು. ಆದರೆ ಕ್ರೀಡಾಕೂಟದ ಪ್ರಿ ಕ್ವಾರ್ಟರ್ನಲ್ಲೇ ಹೊರಬಿದ್ದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.