ADVERTISEMENT

ವಿಶ್ವ ಬ್ಯಾಡ್ಮಿಂಟನ್‌ ರ‍್ಯಾಂಕಿಂಗ್‌: 15ನೇ ಸ್ಥಾನಕ್ಕಿಳಿದ ಪಿ.ವಿ.ಸಿಂಧು

ಪಿಟಿಐ
Published 4 ಜುಲೈ 2023, 23:30 IST
Last Updated 4 ಜುಲೈ 2023, 23:30 IST
ಪಿ.ವಿ.ಸಿಂಧು
ಪಿ.ವಿ.ಸಿಂಧು   

ನವದೆಹಲಿ: ಭಾರತದ ಪಿ.ವಿ.ಸಿಂಧು ಅವರು ಮಂಗಳವಾರ ಪ್ರಕಟವಾದ ಬಿಡಬ್ಲ್ಯುಎಫ್‌ ವಿಶ್ವ ಬ್ಯಾಡ್ಮಿಂಟನ್‌ ರ‍್ಯಾಂಕಿಂಗ್‌ ಪ‍ಟ್ಟಿಯುಲ್ಲಿ 15ನೇ ಸ್ಥಾನಕ್ಕೆ ಇಳಿದಿದ್ದಾರೆ.

ಎರಡು ಬಾರಿಯ ಒಲಿಂಪಿಕ್‌ ಚಾಂಪಿಯನ್‌ ಆಗಿರುವ ಸಿಂಧು ಏಪ್ರಿಲ್‌ನಲ್ಲಿ ಮೊದಲ ಬಾರಿ ‘ಟಾಪ್‌ ಟೆನ್‌’ನಿಂದ ಹೊರಬಿದ್ದಿದ್ದರು. 27 ವರ್ಷದ ಸಿಂಧು ಈ ವರ್ಷ ಉತ್ತಮ ಲಯದಲ್ಲಿ ಇಲ್ಲ. ಕಳೆದ ವರ್ಷ ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಚಿನ್ನದ ಪದಕ ಗೆದ್ದುಕೊಂಡ ನಂತರ ಅವರು ಪಾದದ ಗಾಯದಿಂದ ಬಳಲಿದ್ದರು. ಚೇತರಿಕೆಯ ನಂತರ ಪ್ರಶಸ್ತಿ ಗೆದ್ದುಕೊಂಡಿಲ್ಲ.

ಈ ಋತುವಿನಲ್ಲಿ ಮ್ಯಾಡ್ರಿಡ್‌ ಸ್ಪೇನ್‌ ಮಾಸ್ಟರ್ಸ್‌ ಸೂಪರ್‌ 300 ಟೂರ್ನಿಯ ಫೈನಲ್ ತಲುಪಿದ್ದರು. ಮಲೇಷ್ಯಾ ಮಾಸ್ಟರ್ಸ್‌ ಸೂಪರ್ 500 ಟೂರ್ನಿಯಲ್ಲಿ ಸೆಮಿಫೈನಲ್ ತಲುಪಿದ್ದರು.

ADVERTISEMENT

ಸಾತ್ವಿಕ್‌ಸಾಯಿರಾಜ್ ರಣಕಿರೆಡ್ಡಿ ಮತ್ತು ಚಿರಾಗ್‌ ಶೆಟ್ಟಿ ಅವರು ಪುರುಷರ ಡಬಲ್ಸ್‌ ವಿಶ್ವ ರ್‍ಯಾಂಕಿಂಗ್‌ನಲ್ಲಿ ಮೂರನೇ ಸ್ಥಾನಕ್ಕೇರಿದ್ದಾರೆ.

ಸಿಂಗಲ್ಸ್‌ನಲ್ಲಿ ಎಚ್‌.ಎಸ್‌. ಪ್ರಣಯ್ ಭಾರತೀಯ ಆಟಗಾರರ ಪೈಕಿ ಉತ್ತಮ ರ‍್ಯಾಂಕಿಂಗ್ ಹೊಂದಿದ್ದು ಎಂಟನೇ ಸ್ಥಾನದಲ್ಲಿದ್ದಾರೆ. ಲಕ್ಷ್ಯ ಸೇನ್ ಮತ್ತು ಕಿದಂಬಿ ಶ್ರೀಕಾಂತ್ ಕ್ರಮವಾಗಿ 19 ಮತ್ತು 29ನೇ ಸ್ಥಾನದಲ್ಲಿದ್ದಾರೆ.

ಮಹಿಳಾ ಡಬಲ್ಸ್‌ಲ್ಲಿ ತ್ರಿಸಾ ಜೋಳಿ ಮತ್ತು ಗಾಯತ್ರಿ ಗೋಪಿಚಂದ್ ಒಂದು ಸ್ಥಾನ ಕೆಳಗಿಳಿದಿದ್ದು 17ನೇ ಸ್ಥಾನದಲ್ಲಿ ಇದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.