ಬರ್ಮಿಂಗ್‌ಹ್ಯಾಮ್: ಆಲ್ ಇಂಗ್ಲೆಂಡ್ ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್‌ನಲ್ಲಿ ವಿಶ್ವ ನಂ.1 ಜೋಡಿ ಭಾರತದ ಸಾತ್ವಿಕ್ ಸಾಯಿರಾಜ್ ರಣಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿಗೆ ಮತ್ತೆ ಮೋಡಿ ಮಾಡಲು ಸಾಧ್ಯವಾಗಲಿಲ್ಲ.
ಪುರುಷರ ಡಬಲ್ಸ್ ಪ್ರಿ-ಕ್ವಾರ್ಟರ್‌ಫೈನಲ್‌ನಲ್ಲಿ ಭಾರತದ ಜೋಡಿ, ಇಂಡೋನೇಷ್ಯಾದ ಮುಹಮ್ಮದ್ ಶೋಹಿಬುಲ್ ಫಿಕ್ರಿ ಮತ್ತು ಬಗಾಸ್ ಮೌಲಾನಾ ವಿರುದ್ಧ 16-21, 15-21ರ ಅಂತರದಲ್ಲಿ ಪರಾಭವಗೊಂಡರು.
ಈ ಪಂದ್ಯದಲ್ಲಿ ಸಾತ್ವಿಕ್-ಚಿರಾಗ್ ಜೋಡಿಗೆ ಉತ್ತಮ ಲಯ ಕಂಡುಕೊಳ್ಳಲು ಸಾಧ್ಯವಾಗಲಿಲ್ಲ.
ಇತ್ತೀಚೆಗಷ್ಟೇ ಸಾತ್ವಿಕ್-ಚಿರಾಗ್ ಜೋಡಿ, ಫ್ರೆಂಚ್ ಓಪನ್ ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್‌ನಲ್ಲಿ ಪುರುಷರ ಡಬಲ್ಸ್ ವಿಭಾಗದಲ್ಲಿ ಪ್ರಶಸ್ತಿ ಗೆದ್ದಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.