ಕುಮಮೊಟೊ (ಜಪಾನ್): ಎರಡು ಬಾರಿಯ ಒಲಿಂಪಿಕ್ ಪದಕ ವಿಜೇತೆ ಪಿ.ವಿ.ಸಿಂಧು, ಕುಮಾಮೊಟೊ ಮಾಸ್ಟರ್ಸ್ ಜಪಾನ್ ಸೂಪರ್ 500 ಬ್ಯಾಡ್ಮಿಂಟನ್ ಟೂರ್ನಿಯ ಪ್ರಿಕ್ವಾರ್ಟರ್‌ಫೈನಲ್‌ನಲ್ಲಿ ಸೋಲನುಭವಿಸಿದರು. ಇದರೊಂದಿಗೆ ಈ ಟೂರ್ನಿಯಲ್ಲಿ ಭಾರತದ ಸವಾಲು ಅಂತ್ಯಗೊಂಡಿತು.
ವಿಶ್ವಕ್ರಮಾಂಕದಲ್ಲಿ 20ನೇ ಸ್ಥಾನದಲ್ಲಿರುವ ಸಿಂಧು ಗುರುವಾರ ನಡೆದ ಮಹಿಳಾ ಸಿಂಗಲ್ಸ್ ಎರಡನೇ ಸುತ್ತಿನ ಪಂದ್ಯದಲ್ಲಿ 21–17, 16–21, 17–21 ರಲ್ಲಿ ಕೆನಡಾದ ಮಿಚೆಲ್ ಲಿ ಎದುರು ಸೋಲನುಭವಿಸಿದರು. ಕ್ರಮಾಂಕಪಟ್ಟಿಯಲ್ಲಿ 23ನೇ ಸ್ಥಾನದಲ್ಲಿರುವ ಕೆನಡಾದ ಆಟಗಾರ್ತಿ ಒಂದು ಗಂಟೆ 15 ನಿಮಿಷಗಳಲ್ಲಿ ಪಂದ್ಯ ಗೆದ್ದರು.
ಮುಂದಿನ ಸುತ್ತಿನಲ್ಲಿ ಲಿ ಅವರು ದಕ್ಷಿಣ ಕೊರಿಯಾದ ಯು ಜಿನ್ ಸಿಮ್ ವಿರುದ್ಧ ಆಡಲಿದ್ದಾರೆ.
ಭಾರತದ ಲಕ್ಷ್ಯ ಸೇನ್ ಪುರುಷರ ಸಿಂಗಲ್ಸ್ ಮೊದಲ ಸುತ್ತಿನಲ್ಲೇ ಹೊರಬಿದ್ದಿದ್ದರು. ಮಹಿಳಾ ಡಬಲ್ಸ್‌ನಲ್ಲಿ ಟ್ರಿಸಾ ಜೋಳಿ ಮತ್ತು ಗಾಯತ್ರಿ ಗೋಪಿಚಂದ್ ಸಹ ಕೂಡ ಮೊದಲ ಸುತ್ತಿನಲ್ಲಿ ನಿರ್ಗಮಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.