ಬೆಂಗಳೂರು: ಕರ್ನಾಟಕ ರಾಜ್ಯ ಸಾಫ್ಟಬಾಲ್ ಕ್ರಿಕೆಟ್ ಸಂಸ್ಥೆ ಆಶ್ರಯದಲ್ಲಿ ಕರ್ನಾಟಕ ಸಾಫ್ಟ್ಬಾಲ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯವನ್ನು ಆಯೋಜಿಸಲಾಗಿದೆ.
ಮಂಗಳವಾರ ಆಚಾರ್ಯ ಕ್ರೀಡಾಂಗಣದಲ್ಲಿ ನಡೆಯಲಿರುವ ಕ್ರಿಕೆಟ್ ಪಂದ್ಯದಲ್ಲಿ ಬೆಸ್ಟ್ ಆಫ್ ಕರ್ನಾಟಕ ಮತ್ತು ಬೆಸ್ಟ್ ಆಫ್ ಇಂಡಿಯಾ ತಂಡಗಳು ಮುಖಾಮುಖಿಯಾಗಲಿವೆ. ಭಾರತ ಮಹಿಳಾ ತಂಡದ ಆಟಗಾರ್ತಿ ಶ್ರೇಯಾಂಕಾ ಪಾಟೀಲ ಅವರು ಈ ಪಂದ್ಯಕ್ಕೆ ಮುಖ್ಯ ಅತಿಥಿಯಾಗಿದ್ದಾರೆ. ರಾತ್ರಿ 7.30ಕ್ಕೆ ಪಂದ್ಯ ಆರಂಭವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.